ಎನ್ ಐಟಿ ಸ್ಥಳಾಂತರ ಕೋರಿ ಹೈಕೋರ್ಟ್ ನಲ್ಲಿ ಪಿಐಎಲ್ ಅರ್ಜಿ
ಶ್ರೀನಗರದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯನ್ನು(ಎನ್ ಐಟಿ)ಯನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸಬೇಕು ಎಂದು ಕೋರಿ...

Published On :
ಜಮ್ಮು: ಶ್ರೀನಗರದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯನ್ನು(ಎನ್ ಐಟಿ)ಯನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸಬೇಕು ಎಂದು ಕೋರಿ ಜಮ್ಮು ಕಾಶ್ಮೀರದ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಮಾಜಿ ಬಿಜೆಪಿ ನಾಯಕ ಹರಿ ಓಂ ಎಂಬುವವರು ಎನ್ ಐಟಿ ಸ್ಥಳಾಂತರಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಇಂದು ಇದರ ವಿಚಾರಣೆ ನಡೆಯಲಿದೆ. ಕಾಶ್ಮೀರದಿಂದ ಎನ್ ಐಟಿಯನ್ನು ಸ್ಥಳಾಂತರಿಸುವುದಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇತ್ತೀಚೆಗೆ ಎನ್ ಐಟಿನಲ್ಲಿರುವ ಸ್ಥಳೀಯ (ಕಾಶ್ಮೀರಿ) ವಿದ್ಯಾರ್ಥಿಗಳು ಮತ್ತು ಹೊರ ರಾಜ್ಯದ ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ ನಡೆದಿತ್ತು. ಈ ಹಿನ್ನಲೆಯಲ್ಲಿ ಕ್ಯಾಂಪಸ್ ಅನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಹೊರ ರಾಜ್ಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಆದರೆ ಈ ಒತ್ತಾಯವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


