ಕೇಂದ್ರ ಸರ್ಕಾರದಿಂದ ಐಜಿಎನ್ ಸಿಎ ಮಂಡಳಿಯ ವಿಸರ್ಜನೆ, ಹೊಸ ಅಧ್ಯಕ್ಷರ ನೇಮಕ
ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಕೆಂಗಣ್ಣಿಗೆ ಗುರಿಯಾಗುವಂತಹ ಮತ್ತೊಂದು ನಿರ್ಧಾರ ಕೈಗೊಂಡಿದ್ದು, ಇಂದಿರಾ ಗಾಂಧಿ ರಾಷ್ಟ್ರೀಯ ಕಲಾಕೇಂದ್ರದ ಮಂಡಳಿಯನ್ನು ವಿಸರ್ಜನೆಗೊಳಿಸಿದೆ.

ನವದೆಹಲಿ: ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಕೆಂಗಣ್ಣಿಗೆ ಗುರಿಯಾಗುವಂತಹ ಮತ್ತೊಂದು ನಿರ್ಧಾರ ಕೈಗೊಂಡಿದ್ದು, ಇಂದಿರಾ ಗಾಂಧಿ ರಾಷ್ಟ್ರೀಯ ಕಲಾಕೇಂದ್ರದ ಮಂಡಳಿಯನ್ನು ವಿಸರ್ಜನೆಗೊಳಿಸಿದೆ.
ಐಜಿಎನ್ ಸಿಎ ಮಂಡಳಿಯನ್ನು ವಿಸರ್ಜಿಸಿರುವ ಕೇಂದ್ರ ಸಂಸ್ಕೃತಿ ಸಚಿವ ಮಹೇಶ್ ಶರ್ಮಾ, 20 ಸದಸ್ಯರ ಹೊಸ ತಂಡವನ್ನು ನೇಮಕ ಮಾಡಿದ್ದಾರೆ. ಇನ್ನು ಖ್ಯಾತ ಪತ್ರಕರ್ತ, ಗಾಂಧಿವಾದಿ, ರಾಮ್ ಬಹದ್ದೂರ್ ರೈ ಅವರನ್ನು ಐಜಿಎನ್ ಸಿಎಯ ಮುಂದಿನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸಚಿವ ಮಹೇಶ್ ಶರ್ಮಾ, ಮಂಡಳಿಯ ಸದಸ್ಯರನ್ನು ಹೊಸದಾಗಿ ನೇಮಕ ಮಾಡುವುದು, ಅಧ್ಯಕ್ಷರ ನೇಮಕಾತಿ ಹೊಸದೇನಲ್ಲ, ಅದೊಂದು ನಿರಂತರ ಪ್ರಕ್ರಿಯೆ, ಈ ಹಿಂದೆಯೂ ಇಂತಹ ಪ್ರಕ್ರಿಯೆಗಳು ನಡೆದಿತ್ತು ಎಂದು ಹೇಳಿದ್ದಾರೆ.
ಐಜಿಎನ್ ಸಿಎ ಇನ್ನು ಮುಂದಿನ ದಿನಗಳಲ್ಲಿ ಹೊಸ ಬದಲಾವಣೆಗಳನ್ನು ನೋಡಲಿದ್ದು ಅದರ ಸ್ಥಾಪನೆಯ ಉದ್ದೇಶ ಈಡೇರಲಿದೆ ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿಕೆ ನೀಡಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ನೆನಪಿಗಾಗಿ 1985 ರ ನವೆಂಬರ್ 19 ರಂದು ಐಜಿಎನ್ ಸಿಎ ನ್ನು ಸ್ಥಾಪಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


