ಕೊಲ್ಲಂ ಅಗ್ನಿ ದುರಂತ: ಮೋದಿ, ರಾಹುಲ್ ಭೇಟಿಗೆ ಆಕ್ಷೇಪಿಸಿದ್ದ ಪೊಲೀಸ್ ಮಹಾ ನಿರ್ದೇಶಕ
ಕೇರಳದಲ್ಲಿ ಅಗ್ನಿ ದುರಂತ ಸಂಭವಿಸಿದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವುದಕ್ಕೆ ಕೇರಳ ಪೋಲಿಸ್ ಮಹಾನಿರ್ದೇಶಕ ಟಿ.ಪಿ. ಸೇನ್'ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು.

ತಿರುವನಂತಪುರಮ್: ಕೇರಳದಲ್ಲಿ ಅಗ್ನಿ ದುರಂತ ಸಂಭವಿಸಿದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವುದಕ್ಕೆ ಕೇರಳ ಪೋಲಿಸ್ ಮಹಾನಿರ್ದೇಶಕ ಟಿ.ಪಿ. ಸೇನ್'ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ.
ಪೊಲೀಸ್ ಮಹಾ ನಿರ್ದೇಶಕ ಸೇನ್ ಕುಮಾರ್ ಅವರೇ ಹೇಳಿರುವ ಮಾಹಿತಿ ಪ್ರಕಾರ ಅಗ್ನಿ ದುರಂತ ಸಂಭವಿಸಿದ ಪ್ರದೇಶದಲ್ಲಿ ನಡೆಯುತ್ತಿದ್ದ ರಕ್ಷಣಾ ಕಾರ್ಯಾಚರಣೆಗೆ ಪೊಲೀಸ್ ಸಿಬ್ಬಂದಿಗಳನ್ನು ಬಳಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಅಥವಾ ಇನ್ನಿತರ ವಿವಿಐಪಿ ಗಳಿಗೆ ಹೆಚ್ಚಿನ ಭದ್ರತೆ ಒದಗಿಸುವುದು ಕಷ್ಟ ಸಾಧ್ಯವಾಗಿತ್ತು. ಆದ್ದರಿಂದ ಪ್ರಧಾನಿ ಮೋದಿ ಅವರ ಭೇಟಿಯನ್ನು ಮುಂದೂಡುವಂತೆ ಸಲಹೆ ನೀಡಿದ್ದರು ಎಂದು ತಿಳಿದುಬಂದಿದೆ.
ಸೇನ್ ಕುಮಾರ್ ಅವರ ಸಲಹೆಯಂತೆ ಡಿಜಿಪಿ, ಪ್ರಧಾನಿ ಮೋದಿ ಅವರ ಭೇಟಿಯನ್ನು ಒಂದು ದಿನ ಮುಂದೂಡುವಂತೆ ಎಸ್ ಪಿಜಿ ಗೆ ಮನವಿ ಮಾಡಿದ್ದರು, ಆದರೆ ಡಿಜಿಪಿಯ ಮನವಿಯನ್ನು ನಿರಾಕರಿಸಿದ ಎಸ್ ಪಿಜಿ ತಂಡ ಪ್ರಧಾನಿ ನರೇಂದ್ರ ಮೋದಿ ಅವರು ಅಂದೇ ಭೇಟಿ ನೀಡಲು ನಿರ್ಧರಿಸಿದ್ದಾರೆಂದು ಕಾರಣ ನೀಡಿತ್ತು ಎಂದು ತಿಳಿದುಬಂದಿದೆ. ಕೇವಲ ಮೋದಿ ಅವರ ಭೇಟಿಯನ್ನು ಮಾತ್ರವಲ್ಲದೇ, ರಾಹುಲ್ ಗಾಂಧಿ ಅವರ ಭೆಟಿಗೂ ಸೇನ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ.
ಅಗ್ನಿ ದುರಂತವನ್ನು ತಡೆಗಟ್ಟಲು ವಿಫಲರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದ ತಮ್ಮ ಶಿಫಾರಸ್ಸನ್ನು ಸರಿಯಾಗಿ ಕಾರ್ಯಗತಗೊಳಿಸಿಲ್ಲ ಎಂದು ಗೃಹ ಇಲಾಖೆ ಕಾರ್ಯದರ್ಶಿ ನಳಿನಿ ನೆಟ್ಟೋ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


