ದೇಶ

ಬಿಜೆಪಿಗೆ ಧೈರ್ಯವಿದ್ದರೆ ನನ್ನನ್ನು ಜೈಲಿಗೆ ಕಳುಹಿಸಲಿ: ಹರೀಶ್ ರಾವತ್

ಭಾರತೀಯ ಜನತಾ ಪಕ್ಷದ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿರುವ ಮಾಜಿ ಉತ್ತರಖಾಂಡ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಬಿಜೆಪಿಗೆ ಧೈರ್ಯವಿದ್ದರೆ...

ಬಿಜೆಪಿಗೆ ಧೈರ್ಯವಿದ್ದರೆ ನನ್ನನ್ನು ಜೈಲಿಗೆ ಕಳುಹಿಸಲಿ: ಹರೀಶ್ ರಾವತ್
ಮಾಜಿ ಉತ್ತರಖಾಂಡ ಮುಖ್ಯಮಂತ್ರಿ ಹರೀಶ್ ರಾವತ್ (ಸಂಗ್ರಹ ಚಿತ್ರ)
Published On :

ಡೆಹ್ರಾಡೂನ್: ಭಾರತೀಯ ಜನತಾ ಪಕ್ಷದ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿರುವ ಮಾಜಿ ಉತ್ತರಖಾಂಡ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಬಿಜೆಪಿಗೆ ಧೈರ್ಯವಿದ್ದರೆ ನನ್ನನ್ನು ಜೈಲಿಗೆ ಕಳುಹಿಸಲಿ ಎಂದು ಭಾನುವಾರ ಹೇಳಿದ್ದಾರೆ.
 
ಈ ಕುರಿತಂತೆ ಮಾತನಾಡಿರುವ ಅವರು, ಬಿಜೆಪಿಗೆ ಧೈರ್ಯವಿರುವುದೇ ಆದರೆ, ವಿಧಾನಸಭೆಯನ್ನು ಅಡ್ಡಿ ಪಡಿಸಲಿ, ಇಲ್ಲವೇ ನನ್ನು ಜೈಲಿಗೆ ಕಳುಹಿಸಲಿ. ಮುಂದೆ ಬಂದಿದ್ದನ್ನು ನೋಡಿಕೊಳ್ಳುತ್ತೇನೆ. ಕಾಂಗ್ರೆಸ್ ಹೈ ಕಮಾಂಡ್ ನನ್ನ ಬೆನ್ನಿಗೆ ನಿಂತಿದ್ದು, ನಮ್ಮ ಹೋರಾಟವೇನಿದ್ದರೂ ಪ್ರಜಾಪ್ರಭುತ್ವಕ್ಕಾಗಿಯಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ನಾಯಕರು ರಾಷ್ಟ್ರಪತಿ ಆಡಳಿತದ ಭದ್ರತೆ ಅಡಿಯಲ್ಲಿ ರಾಜ್ಯದಲ್ಲಿ ಅನೈತಿಕ ಸರ್ಕಾರರವನ್ನು ರೂಪಿಸಲು ಯತ್ನ ನಡೆಸುತ್ತಿದ್ದಾರೆ. ಬಿಜೆಪಿಯವರು ಬಹಿರಂಗವಾಗಿಯೇ ಜನರನ್ನು ತಮ್ಮೆಡೆಗೆ ಸೆಳೆಯಲು ಯತ್ನಿಸುತ್ತಿದ್ದಾರೆ, ಆದರೆ, ಉತ್ತರಾಖಾಂಡ್ ನ ಜನತೆ ಬುದ್ಧಿವಂತರಾಗಿದ್ದು, ಅವರು ಇಂತರ ತಂತ್ರಗಳಿಗೆ ಬಗ್ಗುವ ಮೂರ್ಖರಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.