ಈಕ್ವೆಡಾರ್ ನಲ್ಲಿ ಪ್ರಬಲ ಭೂಕಂಪ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ವಾಯುವ್ಯ ದಕ್ಷಿಣ ಅಮೆರಿಕಾದ ಈಕ್ವೆಡಾರ್ ನಲ್ಲಿ ಸಂಭವಿಸಿರುವ ಪ್ರಬಲ ಭೂಕಂಪ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಸಂತಾಪ ಸೂಚಿಸಿದ್ದಾರೆ

ನವದೆಹಲಿ: ವಾಯುವ್ಯ ದಕ್ಷಿಣ ಅಮೆರಿಕಾದ ಈಕ್ವೆಡಾರ್ ನಲ್ಲಿ ಸಂಭವಿಸಿರುವ ಪ್ರಬಲ ಭೂಕಂಪ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಸಂತಾಪ ಸೂಚಿಸಿದ್ದಾರೆ.
ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಭೂಕಂಪದಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಕ್ಕೆ ಸಂತಾಪ ಸೂಚಿಸುತ್ತಿದ್ದೇನೆ. ಘಟನೆ ವೇಳೆ ಗಾಯಗೊಂಡವರು ಶೀಘ್ರದಲ್ಲಿ ಗುಣಮುಖರಾಗರಾಗಲಿ. ಭೂಕಂಪದಲ್ಲಿ ಸಂಭವಿಸಿರುವ ಆಸ್ತಿ ಹಾಗೂ ಮೂಲಭೂತ ಸೌಕರ್ಯಗಳ ಹಾನಿ ಕಡಿಮೆ ಮಟ್ಟದ್ದಾಗಿರಲಿ ಎಂದು ಭಯಸುತ್ತೇನೆಂದು ಹೇಳಿದ್ದಾರೆ.
ವಾಯುವ್ಯ ದಕ್ಷಿಣ ಅಮೆರಿಕಾದ ಈಕ್ವೆಡಾರ್ ರಾಜಧಾನಿ ಕ್ವಿಟೋ ಕರಾವಳಿ ತೀರದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪನ ಇಂದು ಬೆಳಿಗ್ಗೆ ಸಂಭವಿಸಿದ್ದು, ಫೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ಸುನಾಮಿ ಸಂಭವಿಸುವ ಕುರಿತು ಎಚ್ಚರಿಕೆ ರವಾನಿಸಿದೆ. ಭೂಕಂಪದ ಪರಿಣಾಮ ಈಕ್ವೆಡಾರ್ ನಲ್ಲಿ ಹಲವು ಕಟ್ಟಡಗಳು ನೆಲಕ್ಕುರುಳಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ನೂರಾರು ಬೃಹತ್ ಕಟ್ಟಡಗಳು ನೆಲಕ್ಕುರುಳಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಶಂಕೆ ವ್ಯಕ್ತವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


