ಪಶ್ಚಿಮ ಜರ್ಮನಿಯ ಗುರುದ್ವಾರದಲ್ಲಿ ಸ್ಫೋಟ: ಭಾರತ ಕಳವಳ
ಶನಿವಾರ ಸಂಜೆ ಜರ್ಮನಿಯ ಎಸ್ಸೆನ್ ನಗರದ ಗುರುದ್ವಾರದಲ್ಲಿ ಸಂಭವಿಸಿದ ಸ್ಫೋಟ ಸಂಬಂಧ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ...

ಬರ್ಲಿನ್: ಶನಿವಾರ ಸಂಜೆ ಜರ್ಮನಿಯ ಎಸ್ಸೆನ್ ನಗರದ ಗುರುದ್ವಾರದಲ್ಲಿ ಸಂಭವಿಸಿದ ಸ್ಫೋಟ ಸಂಬಂಧ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ.
ಗುರುದ್ವಾರದಲ್ಲಿ ಸ್ಫೋಟ ಸಂಭವಿಸಿರುವುದು ಕೇಳಿ ಆತಂಕವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ.
ಘಟನೆ ಕುರಿತಂತೆ ಜರ್ಮನಿಯಲ್ಲಿನ ನಮ್ಮ ರಾಜತಾಂತ್ರಿಕ ಕಚೇರಿಯು ಪರಿಸ್ಥಿತಿ ಬಗ್ಗೆ ನಿಗಾ ಇಟ್ಟಿದ್ದು ಸ್ಥಳೀಯ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದಾರೆ. ಇನ್ನು ಸ್ಫೋಟದಲ್ಲಿ ಗಾಯಗೊಂಡವರು ಯಾರು ಯಾವ ದೇಶದವರು ಎಂದು ತಿಳಿದುಬಂದಿಲ್ಲ ಎಂದು ಸ್ವರೂಪ್ ಹೇಳಿದ್ದಾರೆ.
ಗುರುದ್ವಾರದಲ್ಲಿ ವಿವಾಹ ಸಮಾರಂಭ ನಡೆಯುತ್ತಿದ್ದ ಗುರುದ್ವಾರದ ಮೇಲೆ ಮುಸುಕುಧಾರಿ ವ್ಯಕ್ತಿಯೊಬ್ಬ ಸ್ಫೋಟಕ ಎಸೆದ ಪರಿಣಾಮ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಜರ್ಮನಿಯಲ್ಲಿ ನಡೆದಿದೆ.
ಗುರುದ್ವಾರದಲ್ಲಿ ವಿವಾಹ ಸಮಾರಂಭ ನಡೆಯುತ್ತಿತ್ತು. ಹಾಗಾಗಿ ಸಾಕಷ್ಟು ಜನರು ನೆರೆದಿದ್ದರು. ಈ ಸಂದರ್ಭದಲ್ಲಿ ಮುಸುಕುಧಾರಿ ವ್ಯಕ್ತಿಯೊಬ್ಬ ಜನರ ಮೇಲೆ ಸ್ಫೋಟಕ ಎಸೆದು ಪರಾರಿಯಾಗಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


