ದೇಶ

ಬಿಜೆಪಿ ಮುಕ್ತ ಭಾರತಕ್ಕೆ ಕರೆ ನೀಡುವುದಕ್ಕೂ ಮುನ್ನ ನಿತೀಶ್ ಜೆಡಿಯು ಪಕ್ಷವನ್ನು ಬಲಗೊಳಿಸಲಿ: ಬಿಜೆಪಿ

ಬಿಜೆಪಿ, ಆರ್ ಎಸ್ ಎಸ್ ಮುಕ್ತ ಭಾರತಕ್ಕೆ ಕರೆ ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ನಿತೀಶ್ ಕುಮಾರ್ ಹಗಲುಕನಸು ಕಾಣುತ್ತಿದ್ದಾರೆ ಎಂದು ಹೇಳಿದೆ.

ಬಿಜೆಪಿ ಮುಕ್ತ ಭಾರತಕ್ಕೆ ಕರೆ ನೀಡುವುದಕ್ಕೂ ಮುನ್ನ ನಿತೀಶ್ ಜೆಡಿಯು ಪಕ್ಷವನ್ನು ಬಲಗೊಳಿಸಲಿ: ಬಿಜೆಪಿ
ಶಾನವಾಜ್ ಹುಸೇನ್
Published On :

ನವದೆಹಲಿ: ಬಿಜೆಪಿ, ಆರ್ ಎಸ್ ಎಸ್ ಮುಕ್ತ ಭಾರತಕ್ಕೆ ಕರೆ ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ನಿತೀಶ್ ಕುಮಾರ್ ಹಗಲುಕನಸು ಕಾಣುತ್ತಿದ್ದಾರೆ ಎಂದು ಹೇಳಿದೆ.
17 ವರ್ಷಗಳ ಹಿಂದೆ ಬಿಜೆಪಿಯ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿದ್ದ ನಿತೀಶ್ ಕುಮಾರ್ ಗೆ ಬಿಜೆಪಿ ಮುಕ್ತ ಭಾರತಕ್ಕೆ ಕರೆ ನೀಡುವ ಅರ್ಹತೆ ಏನಿದೆ ಎಂದು ಬಿಜೆಪಿ ವಕ್ತಾರ ಶಾನವಾಜ್ ಹುಸೇನ್ ಪ್ರಶ್ನಿಸಿದ್ದಾರೆ. ಹತಾಶಗೊಂಡಿರುವ ಜೆಡಿಯು ನಾಯಕ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಹಾರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಕ್ಕೂ ಸಾಧ್ಯವಾಗದ ಪ್ರಾದೇಶಿಕ ಪಕ್ಷದ ನಾಯಕರಾಗಿರುವ ನಿತೀಶ್ ಕುಮಾರ್, ರಾಷ್ಟ್ರೀಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುವ ಕನಸು ಕಾಣುತ್ತಿದ್ದಾರೆ. ಆದರೆ ಅದು ಎಂದಿಗೂ ನನಸಾಗುವುದಿಲ್ಲ ಎಂದು ಹುಸೇನ್ ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಮುಕ್ತ ಭಾರತಕ್ಕೆ ಕರೆ ನೀಡುವುದಕ್ಕೂ ಮುನ್ನ ನಿತೀಶ್ ಕುಮಾರ್ ಜನತಾದಳವನ್ನು ರಾಷ್ಟ್ರಮಟ್ಟದಲ್ಲಿ ಬಲಗೊಳಿಸಲಿ ಎಂದು ಶಾನವಾಜ್ ಹುಸೇನ್ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.