ಛತ್ತೀಸ್ಗಢದಲ್ಲಿ ಐಇಡಿ ಸ್ಫೋಟ: 3 ಸಿಆರ್'ಪಿಎಫ್ ಯೋಧರಿಗೆ ಗಾಯ
ನಕ್ಸಲ್ ಪೀಡಿತ ಪ್ರದೇಶವಾಗಿರುವ ಛತ್ತೀಸ್ಗಢದ ಸುಕ್ಮಾ ಪ್ರದೇಶದಲ್ಲಿ ನಡೆಸಲಾಗುತ್ತಿದ್ದ ನಿಕ್ಸಲ್ ನಿಗ್ರಹ ಕಾರ್ಯಾಚರಣೆ ವೇಳೆ ಐಇಡಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಮೂವರು...

ರಾಯ್ಬುರ: ನಕ್ಸಲ್ ಪೀಡಿತ ಪ್ರದೇಶವಾಗಿರುವ ಛತ್ತೀಸ್ಗಢದ ಸುಕ್ಮಾ ಪ್ರದೇಶದಲ್ಲಿ ನಡೆಸಲಾಗುತ್ತಿದ್ದ ನಿಕ್ಸಲ್ ನಿಗ್ರಹ ಕಾರ್ಯಾಚರಣೆ ವೇಳೆ ಐಇಡಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಮೂವರು ಸಿಆರ್ ಪಿಎಫ್ ಯೋಧರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
74 ಬೆಟಾಲಿಯನ್ ಪಡೆ ಹಾಗೂ ಇನ್ಸ್ ಪೆಕ್ಟರ್ ಚಿಂತಾಪುಫ-ಬುರ್ಕಾಪಾಲ್ ಪ್ರದೇಶದಲ್ಲಿ ನಕ್ಸಲರಿಗಾಗಿ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ನೆಲದಲ್ಲಿ ಬಚ್ಚಿಡಲಾಗಿದ್ದ ಐಇಡಿ ಸ್ಫೋಟಗೊಂಡಿದೆ.
ಘಟನೆ ವೇಳೆ ಮೂವರು ಯೋಧರು ಗಾಯಗೊಂಡಿದ್ದು, ಗಾಯಗೊಂಡ ಯೋಧರಿಗೆ ಜಗ್ದಾಲ್ಪುರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


