ಸೌದಿಯಲ್ಲಿ ಭೀಕರ ಅಗ್ನಿ ದುರಂತ: ಮಂಗಳೂರಿನ ಐವರ ಸಾವು
ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಂಗಳೂರಿನ ಐವರು ಸಾವನ್ನಪ್ಪಿರುವ ಘಟನೆ...

Published On :
ಮಂಗಳೂರು: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಂಗಳೂರಿನ ಐವರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.
ಸೌದಿ ಅರೇಬಿಯಾದ ಅಲ್ ಜುಬೈದ್ ಕೈಗಾರಿಕಾ ಪ್ರದೇಶದಲ್ಲಿನ ಪೆಟ್ರೋಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ ಐವರು ಮಂಗಳೂರಿನವರು ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದಾರೆ.
ಬಸ್ಪೆ ನಿವಾಸಿ ಭಾಸ್ಕರ್(42), ನೀರ್ಮಾರ್ಗಾ ನಿವಾಸಿ ವಿನ್ಸೆಂಟ್(36), ಹಳಯಂಗಡಿ ನಿವಾಸಿ ಮೊಹಮ್ಮದ್ ಅಶ್ರಫ್(35), ವಮನಂಜೂರ್ ನಿವಾಸಿ ಬಾಲಕೃಷ್ಣ ಪೂಜಾರಿ(36) ಮತ್ತು ಸುರತ್ಕಲ್ ನಿವಾಸಿ ಕಾರ್ತಿಕ್ ಸುನಿಲ್(34) ಮೃತಪಟ್ಟ ದುರ್ದೈವಿಗಳು. ಇನ್ನು ಮೃತದೇಹಗಳನ್ನು ರವಾನಿಸಲು ಸೌದಿ ಪೊಲೀಸರು ಸರಿಯಾಗಿ ಸ್ಪಂಧಿಸುತ್ತಿಲ್ಲ ಎಂದು ಮೃತ ಐವರು ಕುಟುಂಬಸ್ಥರು ದೂರಿದ್ದಾರೆ.
ಫ್ಯಾಕ್ಟರಿಯಲ್ಲಿ ಮೂರು ಶಿಫ್ಟ್ ಗಳಲ್ಲಿ ಸುಮಾರು 900 ಮಂದಿ ಕೆಲಸ ಮಾಡುತ್ತಿದ್ದರು. ಮಂಗಳೂರು ಮೂಲದ ಉದ್ಯಮಿ ಈ ಫ್ಯಾಕ್ಟರಿಯ ಮಾಲಿಕರು. ಘಟನೆಯಲ್ಲಿ ಮಲೆಯಾಳಿಗಳು ಸಹ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಭಾಸ್ಕರ್ ಕಳೆದ ಐದು ವರ್ಷಗಳಿಂದ ಈ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದವಾರವಷ್ಟೇ ಮಂಗಳೂರಿಗೆ ಬಂದು ಹೋಗಿದ್ದರು. ಮೃತ ಮೊಹಮ್ಮದ್ ಅಶ್ರಫ್ ಮತ್ತು ಆತನ ಸಹೋದರ ಮೊಹಮ್ಮದ್ ಶರೀಫ್ ಒಂದೇ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ನೈಟ್ ಶಿಫ್ಟ್ ಇದ್ದರಿಂದ ಶರೀಫ್ ಅವರು ಅಪಾಯದಿಂದ ಪಾರಾಗಿದ್ದಾರೆ. ವಿನ್ಸೆಂಟ್ ಮತ್ತು ಕಾರ್ತಿಕ್ ಸುನಿಲ್ ಕಳೆದ ನಾಲ್ಕು ವರ್ಷಗಳಿಂದ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


