ದೇಶ

ಹಂದ್ವಾರದಲ್ಲಿ ಮುಂದುವರೆದ ಪ್ರತಿಭಟನೆ: ಹಲವೆಡೆ ಮತ್ತೆ ಕರ್ಫ್ಯೂ ಜಾರಿ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ಸಂಬಂಧ ಜಮ್ಮುವಿನಲ್ಲಿ ನಿರ್ಮಾಣವಾಗಿದ್ದ ಉದ್ವಿಗ್ನ ವಾತಾವರಣ ಕೊಂಚ ತಣ್ಣಗಾಗಿದೆ ಎನ್ನುತ್ತಿದ್ದಂತೆಯೇ ಮತ್ತೆ ಹಂದ್ವಾರದಲ್ಲಿ ಪ್ರತಿಭಟನೆ ಮುಂದುವರೆದಿದ್ದು...

ಹಂದ್ವಾರದಲ್ಲಿ ಮುಂದುವರೆದ ಪ್ರತಿಭಟನೆ: ಹಲವೆಡೆ ಮತ್ತೆ ಕರ್ಫ್ಯೂ ಜಾರಿ
ಪ್ರತಿಭಟನಾ ಸ್ಥಳದಲ್ಲಿ ಯೋಧರು ಗಸ್ತು ತಿರುಗುತ್ತಿರುವುದು
Published On :

ಶ್ರೀನಗರ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ಸಂಬಂಧ ಜಮ್ಮುವಿನಲ್ಲಿ ನಿರ್ಮಾಣವಾಗಿದ್ದ ಉದ್ವಿಗ್ನ ವಾತಾವರಣ ಕೊಂಚ ತಣ್ಣಗಾಗಿದೆ ಎನ್ನುತ್ತಿದ್ದಂತೆಯೇ ಮತ್ತೆ ಹಂದ್ವಾರದಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಸೋಮವಾರ ಮತ್ತೆ ಹಲವೆಡೆ ಕರ್ಫ್ಯೂ ಜಾರಿಯನ್ನು ಮುಂದುವರೆಸಲಾಗಿದೆ.

ಯೋಧನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪ ಪ್ರಕರಣ ಜಮ್ಮುವಿನಲ್ಲಿ ಸಾಕಷ್ಟು ಉದ್ವಿಗ್ನ ವಾತಾವರಣವನ್ನು ನಿರ್ಮಾಣ ಮಾಡಿತ್ತು. ನಂತರ ಬಾಲಕಿ ಆರೋಪಗಳನ್ನು ತಳ್ಳಿಹಾಕಿದ್ದ ನಂತರ ಪರಿಸ್ಥಿತಿ ಕೊಂಚ ಮಟ್ಟಿಗೆ ನಿಯಂತ್ರಣಕ್ಕೆ ಬಂದಿತ್ತು. ಹೀಗಾಗಿ ಉತ್ತರ ಕಾಶ್ಮೀರದ ಕುಪ್ವಾರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಜಾರಿ ಮಾಡಲಾಗಿದ್ದ ಕರ್ಫ್ಯೂವನ್ನು ಅಧಿಕಾರಿಗಳು ಹಿಂಪಡೆದಿದ್ದರು. ಅಲ್ಲದೆ, ಸ್ಥಗಿತಗೊಳಿಸಲಾಗಿದ್ದ ಮೊಬೈಲ್ ಇಂಟರ್ನೆಟ್ ಸೇವೆಯನ್ನು ತೆರವುಗೊಳಿಸಿದ್ದರು.

ಈ ಹಿಂದೆ ಹಂದ್ವಾರ ಹಾಗೂ ಕುಪ್ವಾರದಲ್ಲಿ ನಡೆಸಲಾಗಿದ್ದ ಪ್ರತಿಭಟನೆಯಲ್ಲಿ ಈ ವರೆಗೂ 5 ಮಂದಿ ಸಾವನ್ನಪ್ಪಿದ್ದರು. ಇದೀಗ ಮತ್ತೆ ಹಂದ್ವಾರ, ಕ್ರಾಲ್ಗುಂಡ್ ಮತ್ತು ತ್ರೆಹ್ಗಾಮ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, 150ಕ್ಕೂ ಹೆಚ್ಚು ಯುವಕರು ಕಲ್ಲು ತೂರಾಟ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಿರುವ ಅಧಿಕಾರಿಗಳು, ಈ ಹಿಂದೆ ಹಂದ್ವಾರ ಸೇರಿದಂತೆ ಇನ್ನಿತರೆ ಪ್ರದೇಶಗಳ ಮೇಲೆ ಹೇರಲಾಗಿದ್ದ ಕರ್ಫ್ಯೂವನ್ನು ಮತ್ತೆ ಜಾರಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.