ಅಯೋಧ್ಯೆ ರಾಮಮಂದಿರಲ್ಲಿ ಮುಂದಿನ ರಾಮನವಮಿ ಆಚರಣೆ: ಸುಬ್ರಹ್ಮಣಿಯನ್ ಸ್ವಾಮಿ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಕಾಮಗಾರಿ ವರ್ಷಾಂತ್ಯದ ವೇಳೆಗೆ ಪ್ರಾರಂಭವಾಗಲಿದೆ

ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಕಾಮಗಾರಿ ವರ್ಷಾಂತ್ಯದ ವೇಳೆಗೆ ಪ್ರಾರಂಭವಾಗಲಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.
ಮುಂದಿನ ವರ್ಷ ಹಿಂದೂಗಳು ಅಯೋಧ್ಯೆಯ ರಾಮಮಂದಿರದಲ್ಲಿ ರಾಮನವಮಿಯನ್ನು ಆಚರಣೆ ಮಾಡಬಹುದು ಎಂದು ಭರವಸೆ ನೀಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಸುಪ್ರೀಂ ಕೋರ್ಟ್ ನಿಂದ ಅನುಮತಿ ಪಡೆದ ಮೂರು ತಿಂಗಳಲ್ಲಿ ಮಂದಿರ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ವಿರಾಟ್ ಹಿಂದೂಸ್ತಾನ್ ಸಂಗಮ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಅಯೋಧ್ಯೆಯ ವಿವಾದಿತ ಪ್ರದೇಶದಲ್ಲಿ ರಾಮ ಮಂದಿರವಲ್ಲದೇ ಮತ್ತೇನೂ ನಿರ್ಮಾಣವಾಗುವುದಕ್ಕೆ ಸಾಧ್ಯವಿಲ್ಲ. ಮೂರು ದೇವಾಲಯಗಳ ನಿರ್ಮಾಣ (ಕಾಶಿ, ಅಯೋಧ್ಯೆ, ಮಥುರಾ) ದೇವಾಲಯಗಳ ನಿರ್ಮಾಣ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸುಬ್ರಹ್ಮಣಿಯನ್ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


