ಕೊಹಿನ್ನೂರ್ ವಜ್ರವನ್ನು ಬ್ರಿಟಿಷರು ಕದ್ದಿಲ್ಲ; ಅದು ಉಡುಗೊರೆಯಾಗಿ ನೀಡಿದ್ದು!
ಕೊಹಿನ್ನೂರ್ ವಜ್ರವನ್ನು ಕದಿಯಲಾಗಿಲ್ಲ ಅಥವಾ ಬಲವಂತವಾಗಿ ಕೊಂಡೊಯ್ಯಲಾಗಿಲ್ಲ. ಈ ಅಮೂಲ್ಯ ವಜ್ರವನ್ನು ಮಹಾರಾಜ ರಂಜಿತ್ ಸಿಂಗ್...

Published On :
ನವದೆಹಲಿ: ಬ್ರಿಟನ್ ಸರ್ಕಾರದ ವಶದಲ್ಲಿರುವ ಅಮೂಲ್ಯ ಕೊಹಿನ್ನೂರ್ ವಜ್ರವನ್ನು ವಾಪಸ್ ಕೇಳುವ ಹಾಗಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಹೇಳಿದೆ. ಕೇಂದ್ರ ಸಾಂಸ್ಕೃತಿಕ ಸಚಿವಾಲಯದ ದಾಖಲೆಗಳ ಪ್ರಕಾರ ಕೊಹಿನ್ನೂರ್ ವಜ್ರವನ್ನು ಕದಿಯಲಾಗಿಲ್ಲ ಅಥವಾ ಬಲವಂತವಾಗಿ ಕೊಂಡೊಯ್ಯಲಾಗಿಲ್ಲ. ಈ ಅಮೂಲ್ಯ ವಜ್ರವನ್ನು ಮಹಾರಾಜ ರಂಜಿತ್ ಸಿಂಗ್ ಈಸ್ಟ್ ಇಂಡಿಯಾ ಕಂಪನಿಗೆ ಉಡುಗೊರೆಯಾಗಿ ನೀಡಿದ್ದರು ಎಂದು ಸಾಲಿಸಿಟರ್ ಜನರಲ್ ಹೇಳಿದ್ದಾರೆ.
ಆಲ್ ಇಂಡಿಯಾ ಹ್ಯೂಮನ್ ರೈಟ್ಸ್ ಆ್ಯಂಡ್ ಸೋಷ್ಯಲ್ ಜಸ್ಟೀಸ್ ಫ್ರಂಟ್ ಎಂಬ ಸಂಘಟನೆ ಸಲ್ಲಿಸಿದ ಅರ್ಜಿಯ ವಿಚಾರಣೆ ಸೋಮವಾರ ನಡೆದಿದ್ದು, ಆ ವೇಳೆ
ಸುಪ್ರೀಂಕೋರ್ಟ್ಗೆ ಕೇಂದ್ರ ಸರ್ಕಾರ ಈ ರೀತಿಯ ಉತ್ತರ ನೀಡಿದೆ.
ಕೊಹಿನ್ನೂರ್ ವಜ್ರ, ಟಿಪ್ಪು ಸುಲ್ತಾನ್ ಅವರ ಖಡ್ಗ ಮತ್ತು ಉಂಗುರವನ್ನು ಬ್ರಿಟಿಷರು ಕೊಂಡೊಯ್ದಿದ್ದು, ಅದನ್ನು ವಾಪಸ್ ತರಬೇಕು ಎಂಬುದು ಈ ಸಂಘಟನೆಯ ಆಗ್ರಹವಾಗಿದೆ.
ಆದರೆ ಕೊಹಿನ್ನೂರ್ ವಜ್ರವನ್ನು ಬ್ರಿಟಿಷರು ಭಾರತದಿಂದ ಕದ್ದೊಯ್ದಿಲ್ಲ, ಬಲವಂತವಾಗಿ ತೆಗೆದುಕೊಂಡೂ ಹೋಗಲಿಲ್ಲ ಎಂದು ಸರ್ಕಾರ ಹೇಳಿದೆ.
ಆದಾಗ್ಯೂ, ಈ ಪ್ರಕರಣದಲ್ಲಿ ವಿದೇಶಾಂಗ ಸಚಿವಾಲಯದ ನಿಲುವು ಏನೆಂದು ಪ್ರಸ್ತುತ ಸಚಿವಾಲಯ ಸುಪ್ರೀಂಕೋರ್ಟ್ಗೆ ತಿಳಿಸಿಲ್ಲ. ಈ ಬಗ್ಗೆ ವರದಿ ಸಲ್ಲಿಸಲು ಕೋರ್ಟ್ ಒಂದು ವಾರದ ಕಾಲಾವಕಾಶವನ್ನು ನೀಡಿದೆ.
1850ರಲ್ಲಿ ವಿಕ್ಟೋರಿಯಾ ಮಹಾರಾಣಿಗೆ ಮಹಾರಾಜ ರಂಜಿತ್ ಸಿಂಗ್ ಈ ವಜ್ರವನ್ನು ಉಡುಗೊರೆಯಾಗಿ ನೀಡಿದ್ದರು. ಕಿರೀಟದಲ್ಲಿರುವ ಈ ವಜ್ರವೀಗ ಟವರ್ ಆಫ್ ಲಂಡನ್ನಲ್ಲಿ ಪ್ರದರ್ಶನ ವಸ್ತುವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


