2.2 ಲಕ್ಷ ಜನರಿಗೆ ಕೇಂದ್ರ ಸರ್ಕಾರದ ಉದ್ಯೋಗ; ಮೋದಿ ಸರ್ಕಾರದ ಕ್ರಮ
ಕೇಂದ್ರ ಸರ್ಕಾರದ ಉದ್ಯೋಗಗಳನ್ನು ಎದುರುನೋಡುತ್ತಿರುವವರಿಗೆ ಒಳ್ಳೆಯ ದಿನಗಳು ಬರುವ ಸೂಚನೆ ಇದೆ.

ನವದೆಹಲಿ: ಕೇಂದ್ರ ಸರ್ಕಾರದ ಉದ್ಯೋಗಗಳನ್ನು ಎದುರುನೋಡುತ್ತಿರುವವರಿಗೆ ಒಳ್ಳೆಯ ದಿನಗಳು ಬಂದಿವೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2 .2 ಲಕ್ಷ ಜನರಿಗೆ ಕೇಂದ್ರ ಸರ್ಕಾರದ ಉದ್ಯೋಗಗಳನ್ನು ನೀಡಲು ಮುಂದಾಗಿದೆ. ಎರಡು ವರ್ಷಗಳ ಕಾಲ ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಮಾರ್ಚ್.1 2015 ರಲ್ಲಿ ಒಟ್ಟು 33 .05 ಲಕ್ಷ ಕೇಂದ್ರ ಸರ್ಕಾರದ ನೌಕರರಿದ್ದರು. 2016 ರಲ್ಲಿ 34 .93 ಲಕ್ಷಕ್ಕೆ ಏರಿಕೆಯಾಗಿದೆ. 2017 ರ ವೇಳೆಗೆ ಈ ಸಂಖ್ಯೆ 35 .23 ರಷ್ಟಾಗಲಿದೆ ಎಂದು ಅಂದಾಜಿಸಲಾಗಿದೆ.
ಕಂದಾಯ ಇಲಾಖೆಯಲ್ಲಿ 70 ಸಾವಿರ ನೇಮಕಾತಿ ನಡೆಯಲಿದ್ದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನೇಮಕಾತಿ ನಡೆಯುವ ಇಲಾಖೆಯಾಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ. 2014 ರ ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಭರವಸೆ ಈಡೇರಿಕೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ 2 .2 ಲಕ್ಷ ಜನರಿಗೆ ಕೇಂದ್ರ ಸರ್ಕಾರದ ಉದ್ಯೋಗಗಳನ್ನು ನೀಡಲು ಮುಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


