ದೇಶ

ನಿತೀಶ್ ಕುಮಾರ್ ಅವರೇ ಪ್ರಧಾನಿ ಅಭ್ಯರ್ಥಿ: ಲಾಲೂ

ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರೇ 2019 ರ ಲೋಕಸಭೆ ಚುನಾವಣೆಯ ಪ್ರಧಾನಿ ಅಭ್ಯರ್ಥಿ, ಅದರಲ್ಲಿ ಎರಡನೇ ಯೋಚನೆಯಿಲ್ಲ ಎಂದು ಆರ್ ಜೆಡಿ ಮುಖ್ಯಸ್ಥ ಲಾಲೂ ..

ನಿತೀಶ್ ಕುಮಾರ್ ಅವರೇ ಪ್ರಧಾನಿ ಅಭ್ಯರ್ಥಿ: ಲಾಲೂ
ಲಾಲೂ ಪ್ರಸಾದ್ ಯಾದವ್
Published On :

ಪಾಟ್ನಾ:  ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರೇ 2019 ರ ಲೋಕಸಭೆ ಚುನಾವಣೆಯ ಪ್ರಧಾನಿ ಅಭ್ಯರ್ಥಿ, ಅದರಲ್ಲಿ ಎರಡನೇ ಯೋಚನೆಯಿಲ್ಲ ಎಂದು ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ.

ಕಳೆದ ವರ್ಷ ಆರ್ ಜೆಡಿ- ಜೆಡಿಯು ಮೈತ್ರಿಯೊಂದಿಗೆ ಬಿಹಾರ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಮಹಾಮೈತ್ರಿ ಕೂಟ ಬಹುಮತ ಗಳಿಸಿ ಸರ್ಕಾರ ರಚನೆ ಮಾಡಿತತ್ತು. ಈ ಹಿನ್ನೆಲೆಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಲಾಲೂ ನಿತೀಶ್ ಕುಮಾರ್ ಅವರೇ ಮುಂದಿನ ಲೋಕಸಭೆ ಚುನಾವಣೆಯ ಪ್ರಧಾನಿ ಅಭ್ಯರ್ಥಿ ಎಂದು ಹೇಳಿದ್ದಾರೆ.

ರಾಜಕೀಯ ಬದ್ಧ ವೈರಿಗಳಾಗಿದ್ದ ನಿತೀಶ್ ಕುಮಾರ್ ಮತ್ತು ಲಾಲೂ ಪ್ರಸಾದ್ ಸ್ನೇಹಿತರಾಗಿ ಬಿಹಾರದಲ್ಲಿ ಸರ್ಕಾರ ರಚಿಸಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯ ಮೋದಿ ವಿರುದ್ಧ ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿಸಲು ಹೊರಟಿದ್ದ ಕಾಂಗ್ರೆಸ್ ಗೆ ಜೆಡಿಯು ಅಧ್ಯಕ್ಷರಾಗಿ ನಿತೀಶ್ ಕುಮಾರ್ ಮತ್ತೆ ಆಯ್ಕೆಯಾಗಿರುವುದು ದೊಡ್ಡ ತಲೆ ನೋವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.