ವಿದ್ಯಾರ್ಥಿ ಸೌರವ್ ಹತ್ಯೆ: 8 ಅಪರಾಧಿಗಳಿಗೆ ಗಲ್ಲು, ಓರ್ವನಿಗೆ ಜೀವಾವಧಿ ಶಿಕ್ಷೆ
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಕಾಲೇಜು ವಿದ್ಯಾರ್ಥಿ ಸೌರವ್ ಚೌಧರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯ...

Published On :
ಬರ್ಸಾತ್: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಕಾಲೇಜು ವಿದ್ಯಾರ್ಥಿ ಸೌರವ್ ಚೌಧರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯ ಮಂಗಳವಾರ 8 ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ಮತ್ತೊರ್ವನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
2014ರಲ್ಲಿ ಸಮಾಜವಿರೋಧಿ ಶಕ್ತಿಗಳ ವಿರುದ್ಧ ನಡೆದ ಹೋರಾಟದ ಮುಂಚೂಣಿಯಲ್ಲಿದ್ದ 21 ವರ್ಷದ ಸೌರವ್ ಹತ್ಯೆ ಪ್ರಕರಣ ವಿಚಾರಣೆ ನಡೆಸಿದ ಏಳನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ದಮನ್ ಪ್ರಸಾದ್ ಬಿಸ್ವಾಸ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ಇತರೆ ಮೂವರಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದರು.
ಅಪರಾಧಿಗಳಾದ ಶ್ಯಾಮಲ್ ಕರ್ಮಾಕರ್, ಸುಮನ್ ಸರ್ಕಾರ್, ಸುಮನ್ ದಾಸ್, ಅಮಲ್ ಬರೂಯಿ, ಸೋಮನಾಥ್ ಸರ್ದಾರ್ ತಪಸ್ ಬಿಸ್ವಾಸ್, ರತನ್ ಸಮದ್ದರ್ ಹಾಗೂ ತಾರಕ್ ದಾಸ್ ಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ಅಲ್ಲದೆ ರಾಕೇಶ್ ಬರ್ಮಾನ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
2014ರ ಜುಲೈ 5ರಂದು ಜಿಲ್ಲೆಯ ಬಮೂನ್ಗಚಿಯಲ್ಲಿ ಈ ಹತ್ಯೆ ನಡೆದಿತ್ತು. ಹತ್ಯೆಯ ಬಳಿಕ ಆತನ ಶವವನ್ನು ರೈಲು ಹಳಿ ಸಮೀಪ ಎಸೆಯಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


