ದೇಶ

ಮುಲಾಯಂ, ಮಾಯಾವತಿ ಇಬ್ಬರನ್ನೂ ಜೈಲಿಗೆ ಕಳುಹಿಸುತ್ತೇವೆ: ಬಿಜೆಪಿ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಹಾಗೂ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಅವರ ವಿರುದ್ಧ ಉತ್ತರ...

ಮುಲಾಯಂ, ಮಾಯಾವತಿ ಇಬ್ಬರನ್ನೂ ಜೈಲಿಗೆ ಕಳುಹಿಸುತ್ತೇವೆ: ಬಿಜೆಪಿ
ಕೇಶವ್ ಪ್ರಸಾದ್ ಮೌರ್ಯ
Published On :
ಲಖನೌ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಹಾಗೂ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಅವರ ವಿರುದ್ಧ ಉತ್ತರ ಪ್ರದೇಶ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಅವರು ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ, ಮುಲಾಯಂ ಸಿಂಗ್ ಹಾಗೂ ಮಾಯಾವತಿ ಅವರನ್ನು ಭ್ರಷ್ಟಾಚಾರ ಆರೋಪದ ಜೈಲಿಗೆ ಕಳುಹಿಸಲಾಗುವುದು ಎಂದು ಫುಲ್ಪುರ ಬಿಜೆಪಿ ಸಂಸದರಾಗಿರುವ 46 ವರ್ಷದ ಮೌರ್ಯ ಅವರು ಹೇಳಿರುವುದಾಗಿ ಪಂಜಾಬ್ ಕೇಸರಿ ವರದಿ ಮಾಡಿದೆ.
ಮಾಯಾವತಿ ಹಾಗೂ ಮುಲಾಯಂ ನೇತೃತ್ವದ ಸರ್ಕಾರಗಳು ಭ್ರಷ್ಟಚಾರದಲ್ಲಿ ತೊಡಗಿವೆ ಎಂದು ಮೌರ್ಯ ಆರೋಪಿಸಿದ್ದಾರೆ.
ಇದೇ ವೇಳೆ ಮುಂದಿನ ವರ್ಷ ನಡೆಯುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 404 ಸ್ಥಾನಗಳ ಪೈಕಿ ಕನಿಷ್ಠ 265 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಧಿಕಾರಕ್ಕೆ ಬರಲಿದೆ ಎಂದು ಮೌರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಉತ್ತರ ಪ್ರದೇಶದಲ್ಲಿ 80 ಲೋಕಸಭಾ ಕ್ಷೇತ್ರಗಳ ಪೈಕಿ 71 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.