ಅಂಡಮಾನ್ ನಲ್ಲಿ ಪ್ರಬಲ ಭೂಕಂಪನ; ರಿಕ್ಟರ್ ಮಾಪಕದಲ್ಲಿ 5.1ರಷ್ಟು ತೀವ್ರ ದಾಖಲು
ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಬುಧವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.1ರಷ್ಟು ತೀವ್ರತೆ ದಾಖಲಾಗಿದೆ...

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಬುಧವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.1ರಷ್ಟು ತೀವ್ರತೆ ದಾಖಲಾಗಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಭೂಕಂಪನ ವಲಯದ ಸುಮಾರು 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಗರ್ಭಶಾಸ್ತ್ರ ಇಲಾಖೆ ಮಾಹಿತಿ ನೀಡಿದೆ. ಬುಧವಾರ ಬೆಳಗಿನ ಜಾವ ಸುಮಾರು 2 ಗಂಟೆ 2 ನಿಮಿಷದಲ್ಲಿ ಭೂಕಂಪನ ಸಂಭವಿಸಿದ್ದು, ಸಾವು-ನೋವಿನ ಕುರಿತು ಈ ವರೆಗೂ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.
ಇಕ್ವೆಡಾರ್ ನಲ್ಲಿ ಸಂಭವಿಸಿದ ಭೀಕರ ಭೂಕಂಪನದಿಂದಾಗಿ ಈ ವರೆಗೂ ಸುಮಾರು 450 ಅಧಿಕ ಮಂದಿ ಸಾವನ್ನಪ್ಪಿದ್ದು, ನೂರಾರು ಕೋಟಿ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ. ಇದರ ಬೆನ್ನಲ್ಲೇ ಭಾರತದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಭೂಕಂಪನ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಇನ್ನು ರಾಷ್ಟ್ರೀಯ ಭೂಗರ್ಭಶಾಸ್ತ್ರ ಇಲಾಖೆಯ ಅಧಿಕಾರಿಗಳು ಅಭಿಪ್ರಾಯಪಟ್ಟಂತೆ ಭೂಕಂಪನ ಕೇಂದ್ರ ಬಿಂದು ದಾಖಲಾಗಿರುವ ಪ್ರದೇಶದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಭೂಕಂಪನಗಳು ಸಂಭವಿಸುತ್ತಿರುತ್ತವೆ. ಇದರಿಂದ ಹೆಚ್ಚಿನ ಗಾಬರಿಯಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


