ಜೆಟ್ ಏರ್ವೇಸ್ ವಿಮಾನಕ್ಕೆ ಬಾಂಬ್ ಬೆದರಿಕೆ
ವಿಮಾನ ಸ್ಫೋಟಿಸುವ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಜೆಟ್ ಏರ್ವೇಸ್ ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ...

Published On :
ಅಹಮದಾಬಾದ್: ವಿಮಾನ ಸ್ಫೋಟಿಸುವ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಜೆಟ್ ಏರ್ವೇಸ್ ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಮುಂಬೈನಿಂದ ಅಹಮದಾಬಾದ್ ಗೆ ಹೊರಟಿದ್ದ ಜೆಟ್ ಏರ್ವೇಸ್ ವಿಮಾನದಲ್ಲಿ 125 ಪ್ರಯಾಣಿಕರು ಮತ್ತು 6 ವಿಮಾನ ಸಿಬ್ಬಂದಿ ಪ್ರಯಾಣಿಸುತ್ತಿದ್ದರು.
ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆಯೇ ಪ್ರಯಾಣಿಕರನ್ನು ಕೆಳಗೆ ಇಳಿಸಿದ ಭದ್ರತಾ ಸಿಬ್ಬಂದಿಗಳು ಕೂಡಲೇ ವಿಮಾನದಲ್ಲಿ ಶೋಧಕಾರ್ಯ ನಡೆಸಿದ್ದು, ಪ್ರಯಾಣಿಕರ ಲಗೇಜುಗಳನ್ನು ತಪಾಸಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ವಿಮಾನದಲ್ಲಿ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಇದೊಂದು ಹುಸಿ ಕರೆಯಾಗಿದ್ದು, ಮತ್ತೆ ವಿಮಾನ ಹಾರಾಟಕ್ಕೆ ಅವಕಾಶ ಮಾಡಿಕೊಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


