ಚಿದಂಬರಂ ಪುತ್ರನ ಬೆಂಗಳೂರಿನ ಕಂಪನಿ ಮೇಲೆ ಇ.ಡಿ ದಾಳಿ
ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಬೆಂಗಳೂರಿನಲ್ಲಿರುವ...

Published On :
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಬೆಂಗಳೂರಿನಲ್ಲಿರುವ ಕಂಪನಿಯ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ಕಾರ್ತಿ ಚಿದಂಬರಂ ಅವರ ವಾಸನ್ ಹೆಲ್ತ್ ಕೇರ್ ಗ್ರೂಪ್ ಮೇಲೆ ದಾಳಿ ನಡೆಸಿದ್ದಾರೆ. ವಿದೇಶಿ ವಿನಿಮಯ ನೀತಿ ಉಲ್ಲಂಘನೆ ಆರೋಪದ ಮೇಲೆ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿದೇಶಿ ನೇರ ಬಂಡವಾಳ ಹೂಡಿಕೆ ನೀತಿಯನ್ನು ಉಲ್ಲಂಘನೆ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ವಾಸನ್ ಹೈಕೇರ್ ಮತ್ತು ಅಡ್ವಾಂಟೇಜ್ ಸ್ಟ್ರಾಟೆಜಿಕ್ ಕಂಪನಿ ಮೇಲೆ ದಾಳಿ ನಡೆಸಿದ್ದಾರೆ. ಏರ್ ಸೇಲ್ ಮತ್ತು ಮ್ಯಾಕ್ಸಿಸ್ ಹಗರಣದಲ್ಲಿ ಈ ಕಂಪನಿ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ.
2015ರ ಡಿಸೆಂಬರ್ ನಲ್ಲಿ ಕಾರ್ತಿ ಚಿದಂಬರಂ ಅವರ ಚೆನ್ನೈನಲ್ಲಿರುವ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಕಾರ್ತಿ ಚಿದಂಬರಂ ಪಾಲುದಾರಿಕೆಯ ವಾಸನ್ ಹೆಲ್ತ್ ಕೇರ್ ಮತ್ತು ಅಡ್ವಾಂಟೇಜ್ ಸ್ಟ್ರ್ಯಾಟಜಿಕ್ ಕನ್ಸಲ್ಟಿಂಗ್ ಕಂಪನಿಗಳಲ್ಲಿ ನಡೆದಿರುವ ವಿದೇಶಿ ವಿನಿಮಯ ಅಕ್ರಮಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruEnforcement Directorateಜಾರಿ ನಿರ್ದೇಶನಾಲಯP Chidambaramಪಿ ಚಿದಂಬರಂಕಾರ್ತಿ ಚಿದಂಬರಂKarti ChidambaramVasan Healthcareವಾಸನ್ ಹೆಲ್ತ್ ಕೇರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


