ಮೂವರು ಉಗ್ರರನ್ನು ಹತ್ಯೆಗೈದ ಭಾರತೀಯ ಯೋಧರು
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆ ಯೋಧರು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆ ಯೋಧರು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ.
ಲೋಲಬ್ ಪರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ಯೋಧರು ಶೋಧ ಕಾರ್ಯ ನಡೆಸುತ್ತಿದ್ದು, ಈ ವೇಳೆ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ಇನ್ನು ಹಲವು ಉಗ್ರರು ಅಡಗಿರುವ ಶಂಕೆ ಹಿನ್ನೆಲೆ ಭಾರತೀಯ ಸೇನೆ ಕಾರ್ಯಾಚರಣೆ ಮುಂದುವರೆಸಿ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


