ಅನುಮತಿ ಪಡೆಯದೇ ಜಾಹೀರಾತಿನಲ್ಲಿ ಮೋದಿ ಫೋಟೋ ಬಳಕೆ: ಕ್ಷಮೆ ಕೇಳಿದ ಪುಣೆ ಉದ್ಯಮಿ
ಅನುಮತಿ ಪಡೆಯದೆ ಜಾಹೀರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರ ಫೋಟೋ ಬಳಕೆ ಮಾಡಿದ ಪ್ರಕರಣಕ್ಕೆ....

ಪುಣೆ: ಅನುಮತಿ ಪಡೆಯದೆ ಜಾಹೀರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರ ಫೋಟೋ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ಮ್ಯಾಪಲ್ ರಿಯಲ್ ಎಸ್ಟೇಟ್ ಗ್ರೂಪ್ ಮೋದಿ ಅವರ ಕ್ಷಮೆ ಯಾಚಿಸಿದೆ.
ಮ್ಯಾಪಲ್ ಗ್ರೂಪ್ ಕಡಿಮೆ ವೆಚ್ಚದ ಮನೆ ನಿರ್ಮಿಸುತ್ತಿದ್ದು, ಕೇವಲ 5 ಲಕ್ಷ ರೂ.ಗೆ ಮನೆ ನೀಡುವುದಾಗಿ ಜಾಹೀರಾತು ನೀಡಿತ್ತು. ಈ ಜಾಹೀರಾತಿನಲ್ಲಿ ನರೇಂದ್ರ ಮೋದಿ ಮತ್ತು ದೇವೇಂದ್ರ ಫಡ್ನವಿಸ್ ಅವರ ಫೋಟೋ ಬಳಕೆ ಮಾಡಿಕೊಳ್ಳಲಾಗಿತ್ತು. ಜತೆಗೆ ಇದನ್ನು ಸರ್ಕಾರ ಯೋಜನೆಯಲ್ಲಿ ನಿರ್ಮಿಸುತ್ತಿರುವುದಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಮ್ಯಾಪಲ್ ಗ್ರೂಪ್ ನೀಡಿರುವ ಜಾಹೀರಾತಿನ ಕುರಿತು ತನಿಖೆ ನಡೆಸುವಂತೆ ಆದೇಶಿಸಿತ್ತು.
ಅನುಮತಿ ಪಡೆಯದೆ ಫೋಟೋ ಬಳಕೆ ಮಾಡಿದ್ದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ನಮ್ಮಿಂದಾಗಿರುವ ತಪ್ಪನ್ನು ನಾವು ತಿದ್ದಿಕೊಳ್ಳುತ್ತೇವೆ ಎಂದು ಮ್ಯಾಪಲ್ ಗ್ರೂಪ್ ಅಧ್ಯಕ್ಷ ಸಚಿನ್ ಅಗರ್ವಾಲ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


