ದೇಶ

ಕಾಂಗ್ರೆಸ್ಸೇತರ ಸರ್ಕಾರ ರಚನೆಗೆ ಕೇಂದ್ರ ಸರ್ಕಾರದ ಸಹಾಯ: ಕಾಂಗ್ರೆಸ್

ಕೇಂದ್ರ ಸರ್ಕಾರ ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತ ವಾಪಸ್ ಪಡೆದರೆ ಕಾಂಗ್ರೆಸ್ಸೇತರ ಸರ್ಕಾರ ರಚನೆಗೆ ಸಹಕಾರ ನೀಡಲಿದೆ ಎಂದು ಕಾಂಗ್ರೆಸ್ ಪಕ್ಷ ಆತಂಕ ವ್ಯಕ್ತಪಡಿಸಿದೆ.

ಕಾಂಗ್ರೆಸ್ಸೇತರ ಸರ್ಕಾರ ರಚನೆಗೆ ಕೇಂದ್ರ ಸರ್ಕಾರದ ಸಹಾಯ: ಕಾಂಗ್ರೆಸ್
ಕೇಂದ್ರ ಸರ್ಕಾರ
Published On :

ಡೆಹ್ರಾಡೂನ್: ಕೇಂದ್ರ ಸರ್ಕಾರ ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತ ವಾಪಸ್ ಪಡೆದರೆ ಕಾಂಗ್ರೆಸ್ಸೇತರ ಸರ್ಕಾರ ರಚನೆಗೆ ಸಹಕಾರ ನೀಡಲಿದೆ ಎಂದು ಕಾಂಗ್ರೆಸ್ ಪಕ್ಷ ಆತಂಕ ವ್ಯಕ್ತಪಡಿಸಿದೆ.
ಬಂಡಾಯ ಕಾಂಗ್ರೆಸ್ ಶಾಸಕರ ನೆರವು ಪಡೆದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉತ್ತಾರಾಖಾಂಡ್ ನಲ್ಲಿ ಕಾಂಗ್ರೆಸ್ಸೇತರ ಸರ್ಕಾರ ರಚನೆಗೆ ನೆರವು ನೀಡಲಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ರಾಜ್ಯಪಾಲರನ್ನು ಭೇಟಿ ಮಾಡಿರುವ ಕಾಂಗ್ರೆಸ್ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ್, ಕೇಂದ್ರ ಸರ್ಕಾರ ರಾಷ್ಟ್ರಪತಿ ಆಡಳಿತವನ್ನು ವಾಪಸ್ ಪಡೆದರೆ, ಮತ್ತೊಮ್ಮೆ ಸರ್ಕಾರ ರಚನೆ ಮಾಡುವುದಕ್ಕೆ  ಮೊದಲು ಕಾಂಗ್ರೆಸ್ ಪಕ್ಷವನ್ನೇ ಆಹ್ವಾನ ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾರೆ.
ಕಾಂಗ್ರೆಸ್ ನ ಶಾಸಕರು ಬಂಡಾಯವೆದ್ದ ಪರಿಣಾಮ ರಾಜಕೀಯ ಅಸ್ಥಿರತೆ ಉಂಟಾದ ಹಿನ್ನೆಲೆಯಲ್ಲಿ ಮಾ.27 ರಂದು ಕೇಂದ್ರ ಸರ್ಕಾರ ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.