ದೇಶ

ಅರುಣಾಚಲ ಪ್ರದೇಶ ಭೂಕುಸಿತ: ಸಂತಾಪ ಸೂಚಿಸಿದ ಸೋನಿಯಾ

ಭಾರೀ ಮಳೆಯಿಂದಾಗಿ ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದವರಿಗೆ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿಯವರು ಶುಕ್ರವಾರ ಸಂತಾಪ ಸೂಚಿಸಿದ್ದಾರೆ...

ಅರುಣಾಚಲ ಪ್ರದೇಶ ಭೂಕುಸಿತ: ಸಂತಾಪ ಸೂಚಿಸಿದ ಸೋನಿಯಾ
ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ
Published On :

ನವದೆಹಲಿ: ಭಾರೀ ಮಳೆಯಿಂದಾಗಿ ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದವರಿಗೆ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿಯವರು ಶುಕ್ರವಾರ ಸಂತಾಪ ಸೂಚಿಸಿದ್ದಾರೆ.

ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ತವಾಂಗ್ ಜಿಲ್ಲೆಯ ಫಮ್ಲಾ ಗ್ರಾಮದಲ್ಲಿ ಕಳೆದ ರಾತ್ರಿ ಭೂ ಕುಸಿತ ಸಂಭವಿಸಿತ್ತು. ಪರಿಣಾಮ 17ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದರು.

ಈ ಘಟನೆ ಕುರಿತಂತೆ ಟ್ವಿಟರ್ ನಲ್ಲಿ ಸೋನಿಯಾ ಅವರು ಆಘಾತ ವ್ಯಕ್ತಪಡಿಸಿದ್ದು, ಮೃತ ಕುಟುಂಬ ಕುರಿತು ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಪರಿಹಾರ ಕಾರ್ಯದಲ್ಲಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸುವಂತೆ ಅರುಣಾಚಲ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರಿಗೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.