ದೇಶ

ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆ: ಭೂಕುಸಿತಕ್ಕೆ 17 ಸಾವು

ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಘಟನೆಯಲ್ಲಿ 17ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ...

ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆ: ಭೂಕುಸಿತಕ್ಕೆ 17 ಸಾವು
ಸಾಂದರ್ಭಿಕ ಚಿತ್ರ
Published On :

ತವಾಂಗ್: ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯ ಫಮ್ಲಾ ಗ್ರಾಮದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಘಟನೆಯಲ್ಲಿ 17ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಸಾವನ್ನಪ್ಪಿದ್ದ 17 ಮಂದಿ ಸ್ಥಳದಲ್ಲಿ ನಿರ್ಮಿಸಲಾಗುತ್ತಿದ್ದ ಪಂಚ ತಾರಾ ಹೋಟೆಲ್ ನಲ್ಲಿ ಕಾರ್ಮಿಕರಾಗಿ ಕಾರ್ಯನಿರ್ವಹಿಸಿದ್ದರು. ಕೆಲವು ದಿನಗಳಿಂದ ಸ್ಥಳದಲ್ಲಿ ಧೀರ್ಘಕಾಲಿಕ ಮಳೆ ಸುರಿದ ಪರಿಣಾಮ ಭೂ ಕುಸಿತ ಉಂಟಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನು ಭೂ ಕುಸಿತದ ಪರಿಣಾಮ ಅವಶೇಷಗಳಡಿ ಮತ್ತಷ್ಟು ಮಂದಿ ಸಿಲುಕಿರುವ ಶಂಕೆಗಳು ವ್ಯಕ್ತವಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಭೂಕುಸಿತ ಕುರಿತಂತೆ ಇಲ್ಲಿನ ಮುಖ್ಯಮಂತ್ರಿ ಕಲಿಖೋ ಪುಲ್ ಅವರು ಈಗಾಗಲೇ ತವಾಂಗ್ ಉಪ ಆಯುಕ್ತರೊಂದಿಗೆ ಮಾತುಕತೆ ನಡೆಸಿದ್ದು, ಮಾಹಿತಿಯನ್ನು ಪಡೆದುಕೊಂಡಿದ್ದಾರೆಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.