ಉಜ್ಜಯಿನಿಯಲ್ಲಿ ಸಿಂಹಸ್ಥ ಕುಂಭ ಮೇಳ ಪ್ರಾರಂಭ: ಸಾಧು-ಸಂತರಿಂದ ಪವಿತ್ರ ಸ್ನಾನ
ಒಂದು ತಿಂಗಳ ಕಾಲ ನಡೆಯಲಿರುವ ಸಿಂಹಸ್ಥ ಕುಂಭ ಮೇಳ ಏ.22 ರಂದು ಉಜ್ಜಯಿನಿಯಲ್ಲಿ ಪ್ರಾರಂಭವಾಗಿದ್ದು ಸಾವಿರಾರು ಜನರು ಕ್ಷಿಪ್ರಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

ಉಜ್ಜಯಿನಿ: ಒಂದು ತಿಂಗಳ ಕಾಲ ನಡೆಯಲಿರುವ ಸಿಂಹಸ್ಥ ಕುಂಭ ಮೇಳ ಏ.22 ರಂದು ಉಜ್ಜಯಿನಿಯಲ್ಲಿ ಪ್ರಾರಂಭವಾಗಿದ್ದು ಸಾವಿರಾರು ಜನರು ಕ್ಷಿಪ್ರಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ಪ್ರತಿ 12 ವರ್ಷಗಳಿಗೊಮ್ಮೆ 12 ಜ್ಯೋತಿರ್ಲಿಂಗವಿರುವ ಕ್ಷೇತ್ರಗಳಲ್ಲಿ ಒಂದಾದ ಉಜ್ಜಯಿನಿಯಲ್ಲಿ ಕುಂಭ ಮೇಳ ನಡೆಯುತ್ತದೆ. 13 ಅಖಾಡಗಳ ಸಾಧು - ಸಂತರು ಸಿಂಹಸ್ಥ ಕುಂಭಮೇಳದಲ್ಲಿ ಭಾಗವಹಿಸುವುದು ಕುಂಭ ಮೇಳದ ಪ್ರಮುಖ ಆಕರ್ಷಣೆಯಾಗಿದ್ದು ಜುನಾ ಅಖಾಡಾದ ಸಾಧು-ಸಂತರ ಪವಿತ್ರ ಸ್ನಾನದೊಂದಿಗೆ ಈ ಬಾರಿಯ ಕುಂಭಮೇಳ ಪ್ರಾರಂಭವಾಗಿದೆ.
ಕುಂಭಮೇಳದಲ್ಲಿ ಸಾಧು-ಸಂತರೂ ಸೇರಿ ದೇಶದ ವಿವಿಧ ಭಾಗಗಳಿಂದ ಸುಮಾರು 5 ಕೋಟಿ ಜನರು ಭಾಗವಹಿಸುವ ನಿರೀಕ್ಷೆ ಇದ್ದು ಮಧ್ಯಪ್ರದೇಶದಲ್ಲಿರುವ ವಿವಿಧ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯದ ಬಳಿ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


