ದೇಶ

ಮಗಳನ್ನು ಕೊಂದು, ಮೃತದೇಹ ಸುಟ್ಟು ಹಾಕಿ, ಕಟ್ಟು ಕಥೆ ಕಟ್ಟಿದ ತಂದೆ

ಮಗಳನ್ನು ಕತ್ತು ಹಿಸುಕಿ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ತಂದೆ ಈಗ ಪೊಲೀಸರ ಅತಿಥಿ...

ಮಗಳನ್ನು ಕೊಂದು, ಮೃತದೇಹ ಸುಟ್ಟು ಹಾಕಿ, ಕಟ್ಟು ಕಥೆ ಕಟ್ಟಿದ ತಂದೆ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಮಗಳನ್ನು ಕತ್ತು ಹಿಸುಕಿ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ತಂದೆ ಈಗ ಪೊಲೀಸರ ಅತಿಥಿಯಾಗಿದ್ದಾನೆ. 
ದೆಹಲಿಯ ಜೈತ್ ಪುರ್ ಪ್ರದೇಶದಲ್ಲಿ ವಕ್ತಿಯೊಬ್ಬ ತನ್ನ ಪತ್ನಿ ಎದುರೇ 15 ವರ್ಷದ ಮಗಳನ್ನು ಕತ್ತು ಹಿಸುಕಿ ಹತ್ಯೆಗೈದಿದ್ದಾನೆ. ತದ ನಂತರ ಮೃತದೇಹವನ್ನು ಹೊರವಲಯದಲ್ಲಿ ಸುಟ್ಟು ಹಾಕಿದ್ದಾನೆ. ಅಷ್ಟೇ ಅಲ್ಲದೇ, ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಇನ್ನುಳಿದ ಇಬ್ಬರು ಮಕ್ಕಳನ್ನು ಕೊಲ್ಲುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದಾನೆ. 
ಅಕ್ಕಪಕ್ಕದವರಿಗೆಲ್ಲಾ ಮೂರ್ಛೆ ರೋಗದಿಂದ ಮಗಳು ಬಳಲುತ್ತಿದ್ದಳು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಥೆ ಕಟ್ಟಿದ್ದಾನೆ. ಆದರೆ, ಪತ್ನಿ ತನ್ನ ದುಃಖವನ್ನು ಪಕ್ಕದ ಮನೆಯವರ ಬಳಿ ಹೇಳಿಕೊಂಡಾಗ, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 
ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ತನ್ನ ಮಗಳನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. 
ಮಗಳು ಬೇರೊಬ್ಬ ಯುವಕನೊಂದಿಗೆ ಸಂಬಂಧ ಹೊಂದಿದ್ದಳು, ಇದಕ್ಕೆ ನಾನು ವಿರೋಧಿಸಿದ್ದೆ. ಈ ವಿಚಾರವಾಗಿ ನಮ್ಮಿಬ್ಬರ ನಡುವೆ ಜಗಳವೂ ನಡೆದಿತ್ತು ಎಂದು ಆರೋಪಿ ಹೇಳಿಕೆ ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.