ಪಂಜಾಬ್ ನಲ್ಲಿ ಯುವತಿ ಎಳೆದೊಯ್ದು ಅತ್ಯಾಚಾರ ಪ್ರಕರಣ: ಓರ್ವನ ಬಂಧನ
ಸುಮಾರು ಒಂದು ತಿಂಗಳ ನಂತರ ಪಂಜಾಬ್ ನ ಮುಕ್ತಸರ ಜಿಲ್ಲೆಯಲ್ಲಿ ಯುವತಿಯೊಬ್ಬಳನ್ನು ಕಚೇರಿಯಿಂದ ಎಳೆದೊಯ್ದು ಅತ್ಯಾಚಾರ ಎಸಗಿದ ಪ್ರಕರಣಕ್ಕೆ...

Published On :
ನವದೆಹಲಿ: ಸುಮಾರು ಒಂದು ತಿಂಗಳ ನಂತರ ಪಂಜಾಬ್ ನ ಮುಕ್ತಸರ ಜಿಲ್ಲೆಯಲ್ಲಿ ಯುವತಿಯೊಬ್ಬಳನ್ನು ಕಚೇರಿಯಿಂದ ಎಳೆದೊಯ್ದು ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
24 ವರ್ಷದ ಯುವತಿಯನ್ನು ಹಾಡ ಹಗಲ್ಲೇ ಕಚೇರಿಯಿಂದ ಎಳೆದೊಯ್ಯುತ್ತಿರುವ ದೃಶ್ಯ ಸಮೀಪದ ಅಂಗಡಿಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಅತ್ಯಾಚಾರ ಎಸಗಿದ ಆರೋಪಿಯ ಗುರಿಂದರ್ (25) ಇಂದು ಪೊಲೀಸರು ಬಂಧಿಸಿ, ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು ಮೂರು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ.
ಅತ್ಯಾಚಾರಕ್ಕೊಳಗಾದ ಯುವತಿ ದಲಿತಳಾಗಿದ್ದು ಮುಕ್ತಸರದ ಮಾಲೌಟಿನ ಕಂಪ್ಯೂಟರ್ ಕೇಂದ್ರ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಕಚೇರಿಯಿಂದ ಆಕೆಯನ್ನು ಬಲಾತ್ಕಾರವಾಗಿ ಎಳೆದೊಯ್ಯುತ್ತಿದ್ದ ದೃಶ್ಯ ಮಾರ್ಚ್ 25ರಂದು ಕ್ಯಾಮರಾದಲ್ಲಿ ದಾಖಲಾಗಿತ್ತು. ಯುವತಿ ಅತನ ಕಪಿಮುಷ್ಠಿಯಿಂದ ತಪ್ಪಿಸಿಕೊಳ್ಳಲು ಹೆಣಗುತ್ತಿದ್ದದ್ದು ವಿಡಿಯೋದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. ಅಪಹರಿಸಿದ ಬಳಿಕ ಆರೋಪಿಯು ಆಕೆಯನ್ನು ಜಿಲ್ಲೆಯ ತಪ ಖೇರ ಗ್ರಾಮಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆಪಾದಿಸಲಾಗಿದೆ.
ಘಟನೆ ನಡೆದ ಐದು ದಿನಗಳ ನಂತರ ಮಹಿಳೆ ಎಫ್ಐಆರ್ ದಾಖಲಿಸಿದ್ದು, ಬಳಿಕ ಪೊಲೀಸರು ಆರೋಪಿಯ ಪತ್ತೆಗೆ ಶೋಧ ಆರಂಭಿಸಿದ್ದರು. ಇಬ್ಬರೂ ಮುಕ್ತಸರ ಜಿಲ್ಲೆಯ ಒಂದೇ ಗ್ರಾಮಕ್ಕೆ ಸೇರಿದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಅಪಹರಣ ಕೃತ್ಯಕ್ಕೆ ಬಳಸಿದ ಕಾರನ್ನು ಇನ್ನೂ ಪತ್ತೆ ಹಚ್ಚಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


