ದೇಶ

ನಾಳೆಯಿಂದ ಸಂಸತ್ ಕಲಾಪ: ಸರ್ವಪಕ್ಷ ಸಭೆ ಕರೆದ ಸ್ಪೀಕರ್

: ಸೋಮವಾರಂದಿಂದ ಪ್ರಾರಂಭವಾಗುತ್ತಿರುವ ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಭಾನುವಾರ ಸರ್ವಪಕ್ಷಗಳ ಸಭೆ...

ನಾಳೆಯಿಂದ ಸಂಸತ್ ಕಲಾಪ: ಸರ್ವಪಕ್ಷ ಸಭೆ ಕರೆದ ಸ್ಪೀಕರ್
ಸಂಸತ್ ಭವನ
Published On :

ನವದೆಹಲಿ: ಸೋಮವಾರಂದಿಂದ ಪ್ರಾರಂಭವಾಗುತ್ತಿರುವ ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಭಾನುವಾರ ಸರ್ವಪಕ್ಷಗಳ ಸಭೆ ಕರೆದಿದ್ದು, ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಲಿದ್ದಾರೆ.

ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿರುವ ಕೇಂದ್ರದ ಕ್ರಮದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಲು ಸಿದ್ಧತೆ ನಡೆಸಿವೆ. ಹಾಗಾಗಿ ಸೋಮವಾರದಿಂದ ಆರಂಭವಾಗಲಿರುವ ಸಂಸತ್ ಕಲಾಪದಲ್ಲಿ ಈ ವಿಷಯ ಚರ್ಚೆಗೆ ಒಳಪಡಲಿದೆ.

ಜತೆಗೆ ಜಿಎಸ್​ಟಿ ಮಸೂದೆಗೆ ಈ ಅಧಿವೇಶನದಲ್ಲಿ ಅಂಗೀಕರ ದೊರೆಯಬೇಕಿದ್ದು, ಕೇಂದ್ರ ಸರ್ಕಾರ ಜಿಎಸ್​ಟಿ ಮಸೂದೆ ಅಂಗೀಕರಿಸಲು ಸರ್ವ ಪ್ರಯತ್ನ ನಡೆಸಲಿದೆ.

ಉತ್ತರಾಖಂಡ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ವಿರೋಧ ಪಕ್ಷಗಳು ಈಗಾಗಲೇ ರಾಜ್ಯ ಸಬೆಯಲ್ಲಿ ನೋಟಿಸ್ ನೀಡಿವೆ. ಜತೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿವಿಧ ವಿರೋಧ ಪಕ್ಷಗಳ ನಾಯಕರನ್ನು ಭೇಟಿ ಮಾಡಿ ಉತ್ತರಾಖಂಡ ರಾಜಕೀಯ ಸ್ಥಿತಿ ಕುರಿತು ಚರ್ಚೆ ನಡೆಸಲು ಸಿದ್ಧತೆ ನಡೆಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.