ಭಾವುಕರಾದ ಮುಖ್ಯ ನ್ಯಾಯಮೂರ್ತಿ ಠಾಕೂರ್ ಗೆ ನ್ಯಾಯಾಂಗ ಸುಧಾರಣೆಯ ಭರವಸೆ ನೀಡಿದ ಪ್ರಧಾನಿ
ನ್ಯಾಯಾಧೀಶರ ಸಂಖ್ಯೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿರುವ ಮೋದಿ ಸಾಮಾನ್ಯ ನಾಗರಿಕ ನ್ಯಾಯಾಂಗದ ಮೇಲೆ ನಂಬಿಕೆ ಕಳೆದುಕೊಳ್ಳದಂತೆ ಎಚ್ಚರ ವಹಿಸುವುದು ನಮ್ಮೆ ಜವಾವ್ದಾರಿಯಾಗಿದೆ ಎಂದಿದ್ದಾರೆ.

ನವದೆಹಲಿ: ನ್ಯಾಯಾಧೀಶರ ಕೊರತೆ ಎದುರಾಗಿರುವುದರ ಪರಿಣಾಮ ನ್ಯಾಯಾಂಗ ವ್ಯವಸ್ಥೆ ಎದುರಿಸುತ್ತಿರುವ ಸಮಸ್ಯೆಗಳನ್ನು ನೆನೆದು ಮುಖ್ಯಮಂತ್ರಿಗಳು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನದಲ್ಲಿ ಕಣ್ಣೀರಿಟ್ಟ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಟಿಎಸ್ ಠಾಕೂರ್ ಅವರ ಬೇಡಿಕೆ ಈಡೇರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಮುಖ್ಯ ನ್ಯಾಯಮೂರ್ತಿಗಳ ನೋವು ನನಗೆ ಅರ್ಥವಾಗುತ್ತದೆ. 1987 ರಿಂದ ಸಾಕಷ್ಟು ಸಮಯ ವ್ಯರ್ಥವಾಗಿದೆ. ಇನ್ನು ಮುಂದೆ ನ್ಯಾಯಾಂಗ ವ್ಯವಸ್ಥೆಯನ್ನು ಸದೃಢಗೊಳಿಸೋಣ. ಹಿಂದಿನಿಂದ ಬಂದ ಬಳುವಳಿಯ ಭಾರವನ್ನು ಇಳಿಸುವ ಪ್ರಯತ್ನ ನಡೆಸೋಣ ಎಂದು ಪ್ರಧಾನಿ ಮೋದಿ ಹೇಳಿದ್ದು, ನ್ಯಾಯಾಧೀಶರ ಸಂಖ್ಯೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಸಾಮಾನ್ಯ ನಾಗರಿಕ ನ್ಯಾಯಾಂಗದ ಮೇಲೆ ನಂಬಿಕೆ ಕಳೆದುಕೊಳ್ಳದಂತೆ ಎಚ್ಚರ ವಹಿಸುವುದು ನಮ್ಮೆ ಜವಾವ್ದಾರಿಯಾಗಿದ್ದು, ಈ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ನಿರ್ವಹಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
"ದೇಶದ ಜನಸಂಖ್ಯೆಗೆ ಅನುಗುಣವಾಗಿ ನ್ಯಾಯಾಧೀಶರ ಸಂಖ್ಯೆ ಇಲ್ಲ. ನಾಗರಿಕರ ಹಾಗೂ ನ್ಯಾಯಾಧೀಶರ ಸಂಖ್ಯೆ ಅನುಪಾತದಲ್ಲಿ ಭಾರಿ ಅಂತರವಿದ್ದು, ಪ್ರಕರಣಗಳ ಮಹಾಪೂರವನ್ನು ನಿರ್ವಹಿಸಲು ಸಾಧ್ಯವಾಗದೇ ನ್ಯಾಯ ವಿತರಣೆ ಕ್ಷಿಪ್ರಗತಿಯಲ್ಲಿ ನಡೆಯುತ್ತಿಲ್ಲ. ನ್ಯಾಯ ವಿತರಣೆ ಪರಿಣಾಮಕಾರಿಯಾಗಿರದೇ ಇದ್ದರೆ ದೇಶದ ಅಭಿವೃದ್ಧಿಯೂ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಟಿಎಸ್ ಠಾಕೂರ್ ಪ್ರಧಾನಿ ಎದುರಲ್ಲೇ ಭಾವುಕರಾಗಿದ್ದರು.
ಪ್ರಸ್ತುತ ಇರುವ 21,000 ನ್ಯಾಯಾಧೀಶರ ಸಂಖ್ಯೆಯನ್ನು 40,000 ಕ್ಕೆ ಏರಿಕೆ ಮಾಡಬೇಕೆಂಬ ಮನವಿ ಹೊರತಾಗಿಯೂ ಈ ವಿಷಯದಲ್ಲಿ ಕಾರ್ಯಾಂಗ ನಿಷ್ಕ್ರಿಯವಾಗಿದೆ ಎಂದು ಟಿಎಸ್ ಠಾಕೂರ್ ಅಸಮಾಧಾನ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


