ದೇಶ

ಅ.ಪ್ರ ಭೂಕುಸಿತ: ಮೃತರ ಕುಟುಂಬಕ್ಕೆ ರು.2 ಲಕ್ಷ ಪರಿಹಾರ ಘೋಷಿಸಿದ ಮೋದಿ

ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದ್ದವರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಲಾ ರು.2 ಲಕ್ಷ ಪರಿಹಾರ ನೀಡುವುದಾಗಿ ಭಾನುವಾರ...

ಅ.ಪ್ರ ಭೂಕುಸಿತ: ಮೃತರ ಕುಟುಂಬಕ್ಕೆ ರು.2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Published On :

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದ್ದವರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಲಾ ರು.2 ಲಕ್ಷ ಪರಿಹಾರ ನೀಡುವುದಾಗಿ ಭಾನುವಾರ ಘೋಷಣೆ ಮಾಡಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಹಲವು ದಿನಗಳಿಂದ ಎಡೆಬಿಡದ ಸುರಿದ ಭಾರಿ ಮಳೆಗೆ ಭೂಕುಸಿತ ಸಂಭವಿಸಿದ 17ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಅಲ್ಲದೆ, ಹಲವು ಗಾಯಗೊಂಡಿದ್ದರು. ತವಾಂಗ್‌ ಜಿಲ್ಲೆ ಪಮ್ಲಾ ಹಳ್ಳಿಯಲ್ಲಿ ಕಟ್ಟಡ ನಿರ್ಮಾಣವೊಂದರಲ್ಲಿ ಹಲವಾರು ಕಾರ್ಮಿಕರು ತೊಡಗಿಕೊಂಡಿದ್ದರು. ಈ ವೇಳೆ ಭೂಕುಸಿತವಾಗಿ ಸಂಭವಿಸಿತ್ತು.

ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದರು. ಇದೀಗ ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಿಸಿದ್ದು, ಮೃತ ಕುಟುಂಬಕ್ಕೆ ತಲಾ ರು.2 ಲಕ್ಷ ಹಾಗೂ ಗಾಯಾಳುಗಳಿಗೆ ರು. 50 ಸಾವಿರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಇನ್ನು ಘಟನೆ ಸಂಬಂಧ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ಗಾಯಾಳುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ನಂತರ ಮಾತನಾಡಿರುವ ಅವರು, ನೈಸರ್ಗಿಕ ವಿಪತ್ತು ಸಂಭವಿಸಿದ್ದು, ಸಾಕಷ್ಟು ಹಾನಿಯಾಗಿದೆ. ಕೇಂದ್ರದಿಂದ ಮತ್ತಷ್ಟು ನಿಧಿಯನ್ನು ಬಿಡುಗಡೆ ಮಾಡುಲು ಪ್ರಯತ್ನಗಳನ್ನು ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.