ಸಮಾಜವಾದಿ ಪಕ್ಷಕ್ಕೆ ಅಭದ್ರತೆ ಕಾಡುತ್ತಿದೆ: ಅಸಾವುದ್ದೀನ್ ಒವೈಸಿ
ಎಂಐಎಂ ಪಕ್ಷದ ಮುಖಂಡ ಮುಖಂಡ ಅಸಾವುದ್ದೀನ್ ಒವೈಸಿ, ಸಮಾಜವಾದಿ ಪಕ್ಷಕ್ಕೆ ಅಭದ್ರತೆ ಕಾಡುತ್ತಿದೆ ಎಂದು ಟೀಕೆ ಮಾಡಿದ್ದಾರೆ.

ಲಖನೌ: ಉತ್ತರ ಪ್ರದೇಶದ ಆಜಂಘರ್ ನಲ್ಲಿ ಸಾರ್ವಜನಿಕ ಸಮಾವೇಶ ನಡೆಸಲು ಅನುಮತಿ ನಿರಾಕರಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಎಂಐಎಂ ಪಕ್ಷದ ಮುಖಂಡ ಮುಖಂಡ ಅಸಾವುದ್ದೀನ್ ಒವೈಸಿ, ಸಮಾಜವಾದಿ ಪಕ್ಷಕ್ಕೆ ಅಭದ್ರತೆ ಕಾಡುತ್ತಿದೆ ಎಂದು ಟೀಕೆ ಮಾಡಿದ್ದಾರೆ.
ಏ.23 ರಂದು ಉತ್ತರಪ್ರದೇಶದ 4 ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿದ ಪ್ರಮುಖವಾಗಿ ಯುವಕತಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಆದರೆ ಆಜಂಘರ್ ನಲ್ಲಿ ಮಾತ್ರ ಸಾರ್ವಜನಿಕ ಸಮಾವೇಶ ನಡೆಸಲು ಅನುಮತಿ ನಿರಾಕರಿಸಲಾಯಿತು ಸಮಾಜವಾದಿ ಪಕ್ಷಕ್ಕೆ ಅಭದ್ರತೆ ಕಾಡುತ್ತಿದೆ ಎಂದು ಅಸಾವುದ್ದೀನ್ ಒವೈಸಿ ಟ್ವಿಟರ್ ನಲ್ಲಿ ಬರೆದಿದ್ದಾರೆ.
ಮುಬಾರಕ್ ಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದ ಹಿನ್ನೆಲೆಯಲ್ಲಿ ಆಜಂಘರ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆ ನಡೆಸಲು ಅಸಾವುದ್ದೀನ್ ಒವೈಸಿಗೆ ಅನುಮತಿ ನಿರಾಕರಿಸಲಾಗಿತ್ತು. ಅನುಮತಿ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಒವೈಸಿ, ಅಖಿಲೇಶ್ ಯಾದವ್ ಅವರೇನು ಅತಿಮಾನುಷ ಶಕ್ತಿಯಲ್ಲ, ಆಜಂಘರ್ ಗೆ ಬಂದೇ ಬರುತ್ತೇನೆ ಎಂದು ಅಸಾವುದ್ದೀನ್ ಒವೈಸಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


