ಮೋದಿಯಿಂದ ಗಾಂಧೀಜಿಯವರ ಕನಸು ನನಸಾಗುವುದು: ಸಚಿವ ಜಿತೇಂದ್ರ ಸಿಂಗ್
ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನನಸು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್...

Published On :
ಕತುವಾ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನನಸು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಭಾರತದ ಗ್ರಾಮಗಳನ್ನು ಉದ್ಧಾರ ಮಾಡುವುದು ಗಾಂಧೀಜಿಯವರ ಕನಸಾಗಿತ್ತು. ಆ ಕನಸುಗಳನ್ನು ಮೋದಿ ನನಸು ಮಾಡುತ್ತಿದ್ದಾರೆ.
ಜಮ್ಮು ಕಾಶ್ಮೀರದ ಕತುವಾದಲ್ಲಿ ಪಂಚಾಯತ್ ರಾಜ್ ದಿನಾಚರಣೆಯ ಸಮಾರಂಭವೊಂದರಲ್ಲಿ ಮಾತನಾಡುತ್ತಿದ್ದಾಗ ಜಿತೇಂದ್ರ ಸಿಂಗ್ ಈ ಮಾತು ಹೇಳಿದ್ದಾರೆ.
ಗ್ರಾಮಗಳ ಉದ್ಧಾರವಾದರೆ ದೇಶ ಉದ್ಧಾರಾವಾದಂತೆ, ಯಾಕೆಂದರೆ ಗ್ರಾಮಗಳೇ ಭಾರತದ ಜೀವಾಳ. ಗಾಂಧೀಜಿಯವರ ಈ ನಿಲುವುಗಳೇ ಮೋದಿಯವರದ್ದು ಕೂಡಾ. ವಿಪಕ್ಷದಲ್ಲಿದ್ದಾಗಲೂ ಗಾಂಧೀಜಿಯವರ ಈ ನಿಲುವುಗಳನ್ನು ನಾವು ಒಪ್ಪಿಕೊಂಡಿದ್ದೆವು. ಕಳೆದ ಆರು ದಶಕಗಳಿಂದ ನಡೆಯದೇ ಇದ್ದ ಕಾರ್ಯಯೋಜನೆಗಳಿಗೆ ಹೊಸ ಸ್ಪರ್ಶವನ್ನು ನೀಡಲು ಮೋದಿ ಸರ್ಕಾರಕ್ಕೆ ಸಾಧ್ಯವಾಗಿದೆ.
ಕೃಷಿಕರಿಗೆ ಮತ್ತು ಗ್ರಾಮೀಣ ಜನತೆಗೆ ಯಾವ ರೀತಿಯ ಸಹಾಯ ಬೇಕೋ ಅದನ್ನೆಲ್ಲಾ ಸರ್ಕಾರ ಮಾಡಲಿದೆ. ಗ್ರಾಮೀಣ ಜನತೆಯ ಉದ್ಧಾರಕ್ಕಾಗಿ ಹಲವಾರು ಯೋಜನೆಗಳನ್ನೂ ಸರ್ಕಾರ ಮಾಡುತ್ತಿದೆ. ಇದರ ಮೂಲಕ ಗ್ರಾಮೀಣ ಜನರ ಬಾಳು ಹಸನಾಗುವುದು ಎಂದು ಜಿತೇಂದ್ರ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


