ಸುಷ್ಮಾ ಸ್ವರಾಜ್ ಆಸ್ಪತ್ರೆಗೆ ದಾಖಲು
ಅನಾರೋಗ್ಯದ ಕಾರಣದಿಂದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ...

Published On :
ನವದೆಹಲಿ: ಅನಾರೋಗ್ಯದ ಕಾರಣದಿಂದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಐಐಎಂಎಸ್ ಆಸ್ಪತ್ರೆ ಮೂಲಗಳ ಪ್ರಕಾರ ಸೋಮವಾರ ಸಂಜೆ 5 ಗಂಟೆಗೆ ಸುಷ್ಮಾ ಅವರನ್ನು ಪಲ್ಮನರಿ ಮೆಡಿಸಿನ್ ಡಿಪಾರ್ಟ್‌ಮೆಂಟ್‌ನ ಹಳೇ ಖಾಸಗಿ ವಾರ್ಡ್‌ನಲ್ಲಿ ದಾಖಲು ಮಾಡಲಾಗಿದೆ. ರಾತ್ರಿ 10 ಗಂಟೆಯ ವೇಳೆಗೆ 64ರ ಹರೆಯದ ಸುಷ್ಮಾ ಅವರನ್ನು ಕಾರ್ಡಿಯೋ ನ್ಯೂರೋ ಸೆಂಟರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಸುಷ್ಮಾ ಅವರ ಆರೋಗ್ಯ ಸ್ಥಿತಿ ಸುಧಾರಿಸಿಕೊಂಡಿದೆ ಎಂದು ವೈದ್ಯರು ಹೇಳಿದ್ದಾರೆ.
ಏತನ್ಮಧ್ಯೆ, ಸುಷ್ಮಾ ಅವರಿಗೆ ಯಾವ ಕಾಯಿಲೆ ಬಂದಿತ್ತು ಎಂಬುದರ ಬಗ್ಗೆ ಮಾಹಿತಿ ಲಭಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


