ದೇಶ

ಅಸ್ಸಾಂನ 6 ಜಿಲ್ಲೆಗಳಲ್ಲಿ ಪ್ರವಾಹ, 1 ಲಕ್ಷಕ್ಕೂ ಹೆಚ್ಚು ಮಂದಿ ನಿರಾಶ್ರಿತರು

ಇಡೀ ದೇಶವೇ ಬೇಸಿಗೆಯ ಬಿಸಿಲಿಗೆ ಬೇಯುತ್ತಿರುವಾಗ ಅಸ್ಸಾಂನಲ್ಲಿ ಮಾತ್ರ ಭಾರಿ ಮಳೆ. ಪರಿಣಾಮ ಅಲ್ಲಿನ 6 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದ್ದು,

ಅಸ್ಸಾಂನ 6 ಜಿಲ್ಲೆಗಳಲ್ಲಿ ಪ್ರವಾಹ, 1 ಲಕ್ಷಕ್ಕೂ ಹೆಚ್ಚು ಮಂದಿ ನಿರಾಶ್ರಿತರು
ಸಂಗ್ರಹ ಚಿತ್ರ
Published On :
ಗುವಾಹಟಿ: ಇಡೀ ದೇಶವೇ ಬೇಸಿಗೆಯ ಬಿಸಿಲಿಗೆ ಬೇಯುತ್ತಿರುವಾಗ ಅಸ್ಸಾಂನಲ್ಲಿ ಮಾತ್ರ ಭಾರಿ ಮಳೆ. ಪರಿಣಾಮ ಅಲ್ಲಿನ 6 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದ್ದು, ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸೂರು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.
ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ ಅಲ್ಲಿನ ಜೊರ್ಹಟ್, ಶಿವಸಾಗರ್, ಕಚರ್, ಟಿನ್​ಸುಕಿಯಾ, ದಿಬ್ರುಗಢ ಮತ್ತು ಚರೈಡಿಯೊ ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದ್ದು, ಐದು ಸಾವಿರ ಹೆಕ್ಟೇರ್​ಗಿಂತಲೂ ಹೆಚ್ಚು ಕೃಷಿ ಭೂಮಿ ಹಾನಿಗೀಡಾಗಿದೆ. 
ಅಸ್ಸಾಂನ ಆರು ಜೆಲ್ಲೆಗಳಲ್ಲಿ ಒಟ್ಟು 40 ನಿರಾಶ್ರಿತ ಕೇಂದ್ರಗಳನ್ನು ತೆರೆಯಲಾಗಿದ್ದರೂ ಕೇವಲ 7,412 ಜನರಿಗಷ್ಟೇ ಪುನರ್ವಸತಿ ಕಲ್ಪಿಸಲು ಸಾಧ್ಯವಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.
ಸೇನೆ, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡಗಳು ಈಗಾಗಲೇ ಈ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.