ದೇಶ

ಮಹಾರಾಷ್ಟ್ರದಿಂದ ಬರ ಪೀಡಿತ ಕರ್ನಾಟಕಕ್ಕೆ ನೀರು

ಭೀಕರ ಬರಗಾಲದಿಂದ ತತ್ತರಿಸಿ ಹೋಗಿರುವ ಕರ್ನಾಟಕದ ಮನವಿಗೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ 1 ಟಿಎಂಸಿ ನೀರು ಬಿಡುಗಡೆ ಮಾಡಿದೆ...

ಮಹಾರಾಷ್ಟ್ರದಿಂದ ಬರ ಪೀಡಿತ ಕರ್ನಾಟಕಕ್ಕೆ ನೀರು
ರಾಜಾಪುರ್ ಜಲಾಶಯದಿಂದ ಕರ್ನಾಟಕಕ್ಕೆ ನೀರು (ಸಂಗ್ರಹ ಚಿತ್ರ)
Published On :

ಬೆಳಗಾವಿ: ಭೀಕರ ಬರಗಾಲದಿಂದ ತತ್ತರಿಸಿ ಹೋಗಿರುವ ಕರ್ನಾಟಕದ ಮನವಿಗೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ 1 ಟಿಎಂಸಿ ನೀರು ಬಿಡುಗಡೆ ಮಾಡಿದೆ.

ನೀರು ಬಿಡುಗಡೆ ಕುರಿತಂತೆ ಕಳೆದ ವಾರ ಮಹಾರಾಷ್ಟ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ್ದ ಮನವಿಗೆ ಮಹಾ ಸಿಎಂ ದೇವೇಂದ್ರ ಫಡ್ನವಿಸ್ ಅವರು ಸ್ಪಂದಿಸಿದ್ದು, ರಾಜ್  ಪುರ್ ಜಲಾಶಯದಿಂದ ಒಂದು ಟಿಎಂಸಿಯಷ್ಟು ನೀರನ್ನು ಬಿಡುಗಡೆ ಮಾಡಿದ್ದಾರೆ. ಈ ವಿಚಾರವನ್ನು ರಾಜ್ ಪುರ್ ಜಲಾಶಯದ ಅಧಿಕಾರಗಳು ಸ್ಪಷ್ಟಪಡಿಸಿದ್ದು, ಜಲಾಶಯದ ಮೂಲಕ 2 ಸಾವಿರ  ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿದೆ. ಅಂತೆಯೇ ಮಂಗಳವಾರದವರೆಗೂ ವಿವಿಧ ಹಂತಗಳಲ್ಲಿ ನೀರನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರದ  ಸಂಗ್ಲಿಯಿಂದ ನಿನ್ನೆ ಸಂಜೆ ಸುಮಾರು 5.30ರವೇಳೆಯಲ್ಲಿ ಬಿಡುಗಡೆಯಾದ ನೀರು ಸಂಜೆ 6.30ರ ಹೊತ್ತಿಗೆ ಕರ್ನಾಟಕದ ಗಡಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕನ್ನು ತಲುಪಿದೆ.

ಮಹಾರಾಷ್ಟ್ರ ಸರ್ಕಾರ ಬಿಡುಗಡೆ ಮಾಡಿರುವ ಈ ಅಲ್ಪ ಪ್ರಮಾಣದ ನೀರು ಸಾಲುತ್ತಿಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ ಅವರು, ಮತ್ತೆ ಮಹಾರಾಷ್ಟ್ರ ಸಿಎಂ ದೇವೆಂದ್ರ ಫಡ್ನವಿಸ್ ಅವರೊಂದಿಗೆ  ದೂರವಾಣಿ ಮೂಲಕ ಮಾತನಾಡಿರುವ 2 ಟಿಎಂಸಿ ನೀರಿಗಾಗಿ ಬೇಡಿಕೆ ಇಟ್ಟಿದ್ದಾರೆ. ತಮ್ಮ ಮನವಿಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್‌ ಅವರೂ ಕೂಡ ಸಕಾರಾತ್ಮಕವಾಗಿ  ಸ್ಪಂದಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರಸ್ತುತ ಎರಡನೇ ಹಂತದ ಬರ ಪರಿಶೀಲನೆ ಪ್ರವಾಸದಲ್ಲಿ ತೊಡಗಿಸಿಕೊಂಡಿರುವ ಸಿದ್ದರಾಮಯ್ಯ ಅವರು, ಸೋಮವಾರ ಬೆಳಗಾವಿಗೆ ಆಗಮಿಸಿ, ಜಿಲ್ಲೆಯ ವಿವಿಧೆಡೆ ಬರಪರಿಶೀಲನೆ  ನಡೆಸಿದರು. ಬಳಿಕ ಸುವರ್ಣ ವಿಧಾನಸೌಧದಲ್ಲಿ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ  ಸರಕಾರದ ಕೋರಿಕೆಯಂತೆ ಮಹಾರಾಷ್ಟ್ರ ನೀರು ಬಿಡುಗಡೆ ಮಾಡಿದೆ. ಆದರೆ, 1 ಟಿಎಂಸಿ ನೀರು ಸಾಲದು. ಹಾಗಾಗಿ, ಮಹಾರಾಷ್ಟ್ರ ಮುಖ್ಯಮಂತ್ರಿ ಫ‌ಡ್ನವೀಸ್‌ ಜತೆ ದೂರವಾಣಿ ಮೂಲಕ  ಮಾತುಕತೆ ನಡೆಸಿದ್ದು, ಹೆಚ್ಚಿನ ನೀರಿಗೆ ಮನವಿ ಮಾಡಿದ್ದೇನೆ. ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಇನ್ನು ಕೃಷ್ಣಾ ನದಿಗೆ ಹೆಚ್ಚುವರಿ ನೀರು ಬಿಡುಗಡೆ ಸಂಬಂಧ ಅಗತ್ಯಬಿದ್ದರೆ ಇಲ್ಲಿಂದ ಜಲಸಂಪನ್ಮೂಲ ಸಚಿವರ ನೇತೃತ್ವದಲ್ಲಿ ನಿಯೋಗ ಕಳಿಸಲು ರಾಜ್ಯ ಸರ್ಕಾರ ಸಿದ್ಧವಿದೆ. ಈಗಾಗಲೇ  ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಕೂಡ ಬರೆಯಲಾಗಿದೆ. ಅಲ್ಲಿಂದ ಉತ್ತರ ಬಂದ ತಕ್ಷಣ ನಿಯೋಗ ಕಳುಹಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.