2ನೇ ವರ್ಷಕ್ಕೆ ಕಾಲಿಡಲಿರುವ ಎನ್'ಡಿಎ: 'ಝರಾ ಮುಸ್ಕುರಾದೋ' ಅಭಿಯಾನಕ್ಕೆ ನಿರ್ಧಾರ
ಮುಂಬರುವ ಮೇ ತಿಂಗಳಿಗೆ ಎರಡು ವರ್ಷ ಪೂರೈಸಲಿರುವ ಕೇಂದ್ರದ ಆಡಳಿತರೂಢ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 'ಝರಾ ಮುಸ್ಕುರಾದೋ' ಎಂಬ ಅಭಿಯಾನ ನಡೆಸಲು...

ನವದೆಹಲಿ: ಮುಂಬರುವ ಮೇ ತಿಂಗಳಿಗೆ ಎರಡು ವರ್ಷ ಪೂರೈಸಲಿರುವ ಕೇಂದ್ರದ ಆಡಳಿತರೂಢ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 'ಝರಾ ಮುಸ್ಕುರಾದೋ' ಎಂಬ ಅಭಿಯಾನ ನಡೆಸಲು ನಿರ್ಧರಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಎರಡು ವರ್ಷಗಳ ತಮ್ಮ ಸರ್ಕಾರದ ಯಶಸ್ಸಿನ ಕಥೆಯನ್ನು ಹಂಚಿಕೊಳ್ಳುವ ಸಲುವಾಗಿ ಮೇ.26 ರಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ 'ಝರಾ ಮುಸ್ಕುರಾದೋ' ಎಂಬ 8 ಗಂಟೆಗಳ ಟಾಕ್ ಶೋಗೆ ಚಾಲನೆ ನೀಡಲಿದೆ ಎಂದು ಹೇಳಲಾಗುತ್ತಿದೆ.
ಈ ಕುರಿತಂತೆ ಖಾಸಗಿ ಮಾಧ್ಯಮವೊಂದು ವರದಿ ಮಾಡಿದ್ದು, ವರದಿಯಲ್ಲಿ ಇಂಡಿಯಾ ಗೇಟ್ ನಲ್ಲಿ ವೀಕ್ಷಕರ ಮುಂದೆ ಪ್ಯಾನೆಲ್ ಡಿಸ್ಕಶನ್ ನಡೆಯಲಿದ್ದು, ಈ ಕಾರ್ಯಕ್ರಮವನ್ನು ದೇಶದಾದ್ಯಂತ ನೇರ ಪ್ರಸಾರ ಮಾಡಲಾಗುತ್ತದೆ ಎಂದು ಹೇಳಿದೆ.
ಇನ್ನು ಕಾರ್ಯಕ್ರಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ, ಎಲ್ ಪಿಜಿ ನೇರ ಸೌಲಭ್ಯ ವರ್ಗಾವಣೆ, ಸಮಾನ ವೇತನ ಸಮಾನ ಪಿಂಚಣಿ ಯೋಜನೆ, ಜನ್ ಧನ್ ಯೋಜನೆಗಳನ್ನು ಹೈಲೈಟ್ ಮಾಡಲಾಗುತ್ತದೆ ಎಂದು ಹೇಳಿಕೊಂಡಿದೆ.
ಇದಲ್ಲದೆ, ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ ಅಭಿಯಾನ, ಡಿಜಿಟಲ್ ಇಂಡಿಯಾ, ಮೇಕ್ ಇನ್ ಇಂಡಿಯಾ, ಗ್ರಾಮೀಣ ವಿದ್ಯುದೀಕರಣ ಸೇರಿದಂತೆ ಮುಂತಾದ ಯೋಜನೆಗಳ ಯಶಸ್ಸನ್ನು ಕಿರು ಸಾಕ್ಷ್ಯಚಿತ್ರಗಳ ಮೂಲಕ ಪ್ರದರ್ಶನ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


