ತೃಣಮೂಲ ಕಾಂಗ್ರೆಸ್ ಪೋಸ್ಟರ್ ನ್ನು ಹರಿದಿದ್ದಕ್ಕೆ 10 ವರ್ಷದ ಬಾಲಕನಿಗೆ ಥಳಿತ!
ತೃಣಮೂಲ ಕಾಂಗ್ರೆಸ್ ನ ಪೋಸ್ಟರ್ ನ್ನು ಹರಿದಿದ್ದಕ್ಕೆ 10 ವರ್ಷದ ಬಾಲಕನನ್ನು ಥಳಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಕೋಲ್ಕತಾ: ತೃಣಮೂಲ ಕಾಂಗ್ರೆಸ್ ನ ಪೋಸ್ಟರ್ ನ್ನು ಹರಿದಿದ್ದಕ್ಕೆ 10 ವರ್ಷದ ಬಾಲಕನನ್ನು ಥಳಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಟಿಎಂಸಿ ಅಭ್ಯರ್ಥಿಯೊಬ್ಬನ ಪೋಸ್ಟರ್ ನ್ನು ಹರಿದು ಹಾಕಿದ್ದಕ್ಕಾಗಿ ಬಾಲಕನಿಗೆ ಥಳಿಸಲಾಗಿದ್ದು, ಈ ಪ್ರಕರಣದಲ್ಲಿ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಈ ವರೆಗೂ ಯಾರನ್ನೂ ಬಂಧನಕ್ಕೊಳಪಡಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಳಿಪಟ ಮಾಡುವುದಕ್ಕಾಗಿ ಪೋಸ್ಟರ್ ಗಳನ್ನು ಹಾರಿದೆ. ಆದರೆ ಇದನ್ನು ಗಮನಿಸಿದ ಕೆಲವರು, ಹೊಡೆದು ಕಾಲು ಕಟ್ಟಿಹಾಕಿ ನನ್ನನ್ನು ಎಸೆದಿದ್ದಾರೆ ಎಂದು ಹಲ್ಲೆಗೊಳಗಾದ ಬಾಲಕ ಹೇಳಿದ್ದಾನೆ. ಬಾಲಕನ ಕುಟುಂಬ ಸದಸ್ಯರು ತೃಣಮೂಲ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದ್ದಾರೆ. ಆದರೆ ಟಿಎಂಸಿ ತನ್ನ ಕಾರ್ಯಕರ್ತರ ವಿರುದ್ಧ ಕೇಳಿಬಂದಿರುವ ಆರೋಪವನ್ನು ಅಲ್ಲಗಳೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


