ದೇಶ

ಕಾಂಡೋಮ್ ಪ್ಯಾಕ್ ಮೇಲೆ 'ಅಶ್ಲೀಲ ಚಿತ್ರ': ವರದಿ ಸಲ್ಲಿಸುವಂತೆ ಸುಪ್ರೀಂ ಆದೇಶ

ಕಾಂಡೋಮ್ ಪ್ಯಾಕ್‌ಗಳಲ್ಲಿ, ಗರ್ಭ ನಿರೋಧಕ ಅಥವಾ ಇನ್ಯಾವುದೇ ಲೈಂಗಿಕ ಆರೋಗ್ಯಕ್ಕೆ ಸಂಬಂಧಪಟ್ಟ ವಸ್ತುಗಳನ್ನು ಮಾರಾಟ ಮಾಡುವ ಕಂಪನಿಗಳು...

ಕಾಂಡೋಮ್ ಪ್ಯಾಕ್ ಮೇಲೆ 'ಅಶ್ಲೀಲ ಚಿತ್ರ': ವರದಿ ಸಲ್ಲಿಸುವಂತೆ ಸುಪ್ರೀಂ ಆದೇಶ
ಸನ್ನಿ ಲಿಯೋನ್
Published On :
ನವದೆಹಲಿ: ಕಾಂಡೋಮ್ ಪ್ಯಾಕ್‌ಗಳಲ್ಲಿ, ಗರ್ಭ ನಿರೋಧಕ ಅಥವಾ ಇನ್ಯಾವುದೇ ಲೈಂಗಿಕ ಆರೋಗ್ಯಕ್ಕೆ ಸಂಬಂಧಪಟ್ಟ ವಸ್ತುಗಳನ್ನು ಮಾರಾಟ ಮಾಡುವ ಕಂಪನಿಗಳು ತಮ್ಮ ಉತ್ಪನ್ನಗಳಲ್ಲಿ ಅಶ್ಲೀಲ ಚಿತ್ರಗಳನ್ನು ಬಳಸಿದ್ದರೆ, ಪ್ರಸ್ತುತ ಕಂಪನಿಗಳು ನಿಯಮವನ್ನು ಉಲ್ಲಂಘನೆ ಮಾಡುತ್ತಿವೆಯೇ? ಎಂಬುದರ ಬಗ್ಗೆ ಕೇಂದ್ರ ಸರ್ಕಾರ ವಿವರಣೆ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಮುಖ್ಯ ನ್ಯಾಯಾಧೀಶ ಟಿಎಸ್ ಠಾಕೂರ್ ಅವರ ನೇತೃತ್ವದ ಪೀಠ ಈ ಬಗ್ಗೆ ಪ್ರಶ್ನಿಸಿದ್ದು, ಕಾಂಡೋಮ್ ಪ್ಯಾಕ್‌ಗಳ ಮೇಲೆ ಅಶ್ಲೀಲ ಚಿತ್ರಗಳನ್ನು ಪ್ರಕಟಿಸಿ ಕಂಪನಿಗಳು ನಿಯಮ ಉಲ್ಲಂಘನೆ ಮಾಡಿದ್ದರೆ ಆ ಬಗ್ಗೆ ವಿವರಣೆ ನೀಡಬೇಕೆಂದು ಅಡಿಷನಲ್ ಸಾಲಿಸಿಟರ್ ಜನರಲ್ ಮನಿಂದರ್ ಸಿಂಗ್ ಅವರಿಗೆ ಸೂಚಿಸಿದ್ದಾರೆ. ಈ ಬಗ್ಗೆ ವರದಿ ಸಲ್ಲಿಸಲು ಸಿಂಗ್ ಅವರಿಗೆ ಒಂದು ವಾರ ಕಾಲಾವಕಾಶವನ್ನು ನೀಡಲಾಗಿದೆ. 
ಈ ಜಾಹೀರಾತುಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೋ ಬೇಡವೋ ಎಂಬುದನ್ನು ನೀವೇ ಹೇಳಿ. ಇಂಥಾ ಜಾಹೀರಾತುಗಳನ್ನು ನೋಡಿ, ಇದರ ಬಗ್ಗೆ ನಿಮ್ಮ ನಿಲುವು ಏನೆಂಬುದನ್ನು ಸ್ಪಷ್ಟ ಪಡಿಸಿ ಎಂದು ಸಿಂಗ್ ಅವರಿಗೆ ನ್ಯಾಯಪೀಠ ಆದೇಶಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.