ಆರೆಸ್ಸೆಸ್‌ನಲ್ಲಿ ಮಹಿಳೆಯರಿಗೂ ಸಮಾನ ಪ್ರಾತಿನಿಧ್ಯ ನೀಡಿ: ತೃಪ್ತಿ ದೇಸಾಯಿ
ರಾಷ್ಟ್ರೀಯ ಸ್ವಯಂ ಸೇವಕ ದಳದಲ್ಲಿಯೂ ಮಹಿಳೆಯರಿಗೆ ಸಮಾನ ಪ್ರಾತಿನಿಧ್ಯ ನೀಡಿ ಎಂದು ಭೂಮಾತಾ ಬ್ರಿಗೇಡ್ ನಾಯಕಿ ತೃಪ್ತಿ ದೇಸಾಯಿ ಮೋಹನ್ ...

Published On :
ನಾಗ್ಪುರ್: ರಾಷ್ಟ್ರೀಯ ಸ್ವಯಂ ಸೇವಕ ದಳದಲ್ಲಿಯೂ ಮಹಿಳೆಯರಿಗೆ ಸಮಾನ ಪ್ರಾತಿನಿಧ್ಯ ನೀಡಿ ಎಂದು ಭೂಮಾತಾ ಬ್ರಿಗೇಡ್ ನಾಯಕಿ ತೃಪ್ತಿ ದೇಸಾಯಿ ಮೋಹನ್ ಭಾಗ್ವತ್ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.
ಮಹಿಳೆಯರ ಮತಗಳಿಂದ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೇರಿದೆ. ಆದ್ದರಿಂದ ಬಿಜೆಪಿಯ ಘಟಕವಾಗಿರುವ ಆರೆಸ್ಸೆಸ್ಸ್ ನಲ್ಲಿಯೂ ಮಹಿಳೆಯರಿಗೆ ಸ್ಥಾನ ನೀಡಬೇಕು ಎಂದು ತೃಪ್ತಿ ದೇಸಾಯಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.
ದೇವಾಲಯದಲ್ಲಿ ಮಹಿಳೆಯರಿಗೆ ಪ್ರವೇಶ ನೀಡಬೇಕು ಎಂದು ಒತ್ತಾಯಿಸಿ ಅದಕ್ಕಾಗಿ ಹೋರಾಟ ನಡೆಸಿ ಮಹಿಳೆಯರನ್ನು ದೇವಾಲಯ ಪ್ರವೇಶ ಮಾಡಿಸಿದ ಖ್ಯಾತಿ ತೃಪ್ತಿ ದೇಸಾಯಿ ಅವರದ್ದು. ಸುಮಾರು 4,000 ಸದಸ್ಯರನ್ನು ಹೊಂದಿರುವ ಭೂಮಾತಾ ಬ್ರಿಗೇಡ್‌ನ ನಾಯಕಿಯಾಗಿರುವ ತೃಪ್ತಿ ದೇಸಾಯಿ ಶನಿ ಶಿಂಗ್ಣಾಪುರಕ್ ಮತ್ತು ತೃಂಬಕೇಶ್ವರ ದೇಗುಲಕ್ಕೆ ಮಹಿಳೆಯರ ಪ್ರವೇಶ ಮಾಡಿಸಿ ಗೆಲವು ಸಾಧಿಸಿದ್ದರು.
ಮೋಹನ್ ಭಾಗ್ವತ್ ಅವರಿಗೆ ಬರೆದ ಪತ್ರದಲ್ಲಿ ನಿಮ್ಮನ್ನು ಭೇಟಿ ಮಾಡಲು ಅವಕಾಶ ನೀಡಬೇಕು ಎಂದೂ ತೃಪ್ತಿ ಬಿನ್ನವಿಸಿಕೊಂಡಿದ್ದಾರೆ ಎಂದು ಬಲ್ಲಮೂಲಗಳು ವರದಿ ಮಾಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


