ನನ್ನ ಹೋರಾಟಕ್ಕೆ ಬಾಲಿವುಡ್ ಖಾನ್ ತ್ರಯರು ಬೆಂಬಲ ನೀಡಬೇಕು: ತೃಪ್ತಿ ದೇಸಾಯಿ
ಹಾಜಿ ಅಲಿ ದರ್ಗಾಗೆ ಮಹಿಳೆಯರಿಗೆ ಪ್ರವೇಶ ನೀಡುವಂತೆ ಕೋರಿ ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ನಟರಾದ ಆಮೀರ್ ಖಾನ್, ಸಲ್ಮಾನ್ ಖಾನ್ ...

ಮುಂಬಯಿ: ಹಾಜಿ ಅಲಿ ದರ್ಗಾಗೆ ಮಹಿಳೆಯರಿಗೆ ಪ್ರವೇಶ ನೀಡುವಂತೆ ಕೋರಿ ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ನಟರಾದ ಆಮೀರ್ ಖಾನ್, ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಬೆಂಬಲ ನೀಡಬೇಕು ಎಂದು ಭೂಮಾತಾ ರಣರಾಗಿಣಿ ಬ್ರಿಗೇಡ್ನ ಅಧ್ಯಕ್ಷೆ ತೃಪ್ತಿ ದೇಸಾಯಿ ಮನವಿ ಮಾಡಿದ್ದಾರೆ.
ಶನಿ ಶಿಂಗನಾಪುರ ಮತ್ತು ತ್ರಯಂಬಕೇಶ್ವರ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿರುವ ತೃಪ್ತಿ ದೇಸಾಯಿ ಈಗ ಹಾಜಿ ಅಲಿ ದರ್ಗಾಗೆ ಮಹಿಳೆಯರಿಗೆ ಪ್ರವೇಶ ನೀಡಬೇಕು ಎಂದು ಹೋರಾಟ ಆರಂಭಿಸಿದ್ದಾರೆ.
ತೃಪ್ತಿ ದೇಸಾಯಿ ಮತ್ತು ಇತರ ಹೋರಾಟಗಾರರು ಹಾಜಿ ಅಲಿ ದರ್ಗಾದ ಬಳಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಭಾರೀ ಬಿಗಿ ಭದ್ರತೆ ಒದಗಿಸಲಾಗಿದೆ. ನಾವು ದರ್ಗಾ ಬಳಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿದ್ದೇವೆ. ನಾಳೆ ಮುಂದಿನ ಕ್ರಮದ ಕುರಿತು ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


