ವೆಲ್ಲರದ ಗ್ರಾಮ ಕಚೇರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: 7 ಅಧಿಕಾರಿಗಳಿಗೆ ಗಾಯ
ಇಲ್ಲಿನ ವೆಲ್ಲರದ ಗ್ರಾಮ ಕಚೇರಿಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ 7 ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ...

ತಿರುವನಂತರಪುರಂ: ಇಲ್ಲಿನ ವೆಲ್ಲರದ ಗ್ರಾಮ ಕಚೇರಿಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ 7 ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ಜಾತಿ ಪ್ರಮಾಣಪತ್ರವನ್ನು ನೀಡುತ್ತಿದ್ದ ಸರ್ಕಾರಿ ಕಚೇರಿಗೆ ಹೆಲ್ಮೆಟ್ ಧರಿಸಿಕೊಂಡು ಬಂದಿದ್ದ ವ್ಯಕ್ತಿಯೊಬ್ಬ ಅಧಿಕಾರಿಯ ಟೇಬಲ್ ಬಳಿ ಹೋಗಿದ್ದ. ಈ ವೇಳೆ ಇದ್ದಕ್ಕಿದ್ದಂತೆ ರಾಸಾಯನಿಕ ದ್ರವವೊಂದನ್ನು ಸುರಿದು ಬೆಂಕಿ ಹಚ್ಚಿದ್ದ ನಂತರ ಕ್ಷಣಾರ್ಧದಲ್ಲಿ ಸ್ಥಳದಿಂದ ಪರಾರಿಯಾದನೆಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಘಟನೆ ವೇಳೆ ಬೆಂಕಿ ಕಚೇರಿಗೆ ಹೊತ್ತಿಕೊಂಡ ಪರಿಣಾಮ ಸ್ಥಳದಲ್ಲಿದ್ದ 7 ಅಧಿಕಾರಿಗಳು ಗಾಯಗೊಂಡಿದ್ದಾರೆ. ಇದರಂತೆ ಪಕ್ಕದಲ್ಲಿದ್ದ ಸರ್ಕಾರದ ವತಿಯಿಂದ ನಡೆಸಲಾಗುತ್ತಿದ್ದ ಹೋಮಿಯೋಪತಿ ಕ್ಲಿನಿಕ್ ಕೂಡ ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.
ಇನ್ನು ಗಾಯಗೊಂಡ 7 ಅಧಿಕಾರಿಗಳ ಪೈಕಿ ಓರ್ವ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ವೈದ್ಯಕೀಯ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಕಚೇರಿಯಲ್ಲಿ ಬೆಂಕಿ ಆವರಿಸುತ್ತಿದ್ದಂತೆಯೇ ಸ್ಥಳೀಯರು ಅಧಿಕಾರಿಗಳನ್ನು ರಕ್ಷಿಸಿದ್ದಾರೆ. ನಂತರ ಆಸ್ಪತ್ರೆಗೆ ದಾಖಲಿಸಿದ್ದರು ಎನ್ನಲಾಗಿದೆ.
ಘಟನೆ ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪೊಲೀಸ್ ಮುಖ್ಯಸ್ಥ ಶೆಫೀನ್ ಅಹ್ಮದ್ ಅವರು, ಘಟನೆಗೆ ಕಾರಣವಾದ ದುಷ್ಕರ್ಮಿಗಾಗಿ ತೀವ್ರ ಹುಡುಕಾಟ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ. ಘಟನೆಗೆ ಮುಖ್ಯ ಕಾರಣ ತನಿಖೆಯ ನಂತರವಷ್ಟೇ ತಿಳಿದುಬರಲಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


