ದಿಗ್ವಿಜಯ್ ಸಿಂಗ್ ಪುತ್ರಿ ಕಾರ್ನಿಕಾ ಕ್ಯಾನ್ಸರ್ ನಿಂದ ಸಾವು
ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರ ಪುತ್ರಿ ಕಾರ್ನಿಕಾ ಶುಕ್ರವಾರ...

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರ ಪುತ್ರಿ ಕಾರ್ನಿಕಾ ಶುಕ್ರವಾರ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಕರ್ನೀಕಾ ಕುಮಾರಿ ಅವರು ಹಲವು ತಿಂಗಳಿನಿಂದಲೂ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು. ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಕಳೆದೆರಡು ದಿನಗಳಿಂದ ಅವರ ಸ್ಥಿತಿ ತೀರಾ ಚಿಂತಾಜನಕವಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 5.15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆಂದು ಹೇಳಲಾಗುತ್ತಿದೆ.
ಕರ್ನೀಕಾ ಅವರ ಮೃತ ದೇಹ ಅಹ್ಮದಾಬಾದ್ ಗೆ ಕರೆತರಲಾಗುತ್ತಿದ್ದು, ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಹಲವು ನಾಯಕರು ದಿಗ್ವಿಜಯ್ ಸಿಂಗ್ ನಿವಾಸಕ್ಕೆ ಭೇಟಿ ನೀಡಲಿದ್ದಾರೆಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


