ಸರ್ಕಾರದಿಂದ ನೇತಾಜಿ ಸ್ಮಾರಕ ನಿರ್ಮಾಣ, ಮತ್ತೆ 25 ಕಡತಗಳ ಬಿಡುಗಡೆ
ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 25 ಕಡತಗಳನ್ನು ಶುಕ್ರವಾರ ಬಿಡುಗಡೆ ಮಾಡಿರುವ ಕೇಂದ್ರ...

Published On :
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 25 ಕಡತಗಳನ್ನು ಶುಕ್ರವಾರ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೇತಾಜಿಯ ಸ್ಮಾರಕ ನಿರ್ಮಾಣ ಮಾಡುವುದಾಗಿ ಘೋಷಿಸಿದೆ.
ಇಂದು ಮಧ್ಯಾಹ್ನ ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಹಾಗೂ ಗೃಹ ಸಚಿವಾಲಯದಿಂದ ನೇತಾಜಿಗೆ ಸಂಬಂಧಿಸಿದ 1956ರಿಂದ 2009ರವರೆಗಿನ ತಲಾ 10 ಕಡತಗಳು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ 15 ಕಡಗಳನ್ನು ಬಿಡುಗಡೆ ಮಾಡಲಾಗಿದೆ.
ನೇತಾಜಿ ಕಡತಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಕೇಂದ್ರ ಸಂಸ್ಕೃತಿ ಸಚಿವ ಮಹೇಶ್ ಶರ್ಮಾ ಅವರು, ಈ ದೇಶದ ಜನ ವಿಶೇಷವಾಗಿ ಯುವಕರು ನೇತಾಜಿ ಜೀವನದ ಬಗ್ಗೆ ತಿಳಿದುಕೊಳ್ಳಲು ಬಯಸುತ್ತಾರೆ. ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆ ಅಪಾರ ಎಂದರು.
ಕಳೆದ ತಿಂಗಳು ಬೋಸ್‌ಗೆ ಸಂಬಂಧಪಟ್ಟ 50 ಕಡತಗಳನ್ನು www.Netajipapers.Gov.In. ಪೋರ್ಟಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಜನವರಿ 23 ರಂದು ನೇತಾಜಿ ಅವರ 119ನೇ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಅವರು ನೂರರಷ್ಟು ರಹಸ್ಯ ಕಡತಗಳನ್ನು ಬಹಿರಂಗ ಪಡಿಸಿದ್ದರು.
ಆದಾಗ್ಯೂ, ನೇತಾಜಿಗೆ ಸಂಬಂಧಪಟ್ಟ ಎರಡು ಪ್ರಧಾನ ಕಡತಗಳನ್ನು ಈ ವರ್ಷಾಂತ್ಯದಲ್ಲಿ ಜಪಾನ್ ಬಿಡುಗಡೆಗೊಳಿಸಲಿದೆ ಎಂದು ಕೇಂದ್ರ ಸರ್ಕಾರ ಹೇಳಿದ್ದರೂ, ಜಪಾನ್ ಬಳಿಯಿರುವ ಇನ್ನೂ ಮೂರು ಕಡತಗಳನ್ನು ಯಾವಾಗ ಬಿಡುಗಡೆ ಮಾಡಲಾಗುವುದು ಎಂಬುದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಜಪಾನ್‌ನಿಂದ ಮಾಹಿತಿ ಸಿಕ್ಕಿಲ್ಲ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


