ನೇತಾಜಿ ಸುಭಾಷ್ ಚಂದ್ರ ಬೋಸ್‌ಗೆ ಸಂಬಂಧಿಸಿದ 25 ಕಡತಗಳ ಬಿಡುಗಡೆಗೆ ಕ್ಷಣಗಣನೆ
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 25 ಕಡತಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಮಧ್ಯಾಹ್ನ ಬಿಡುಗಡೆ ಮಾಡಲಿದೆ...

Published On :
ದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 25 ಕಡತಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಮಧ್ಯಾಹ್ನ ಬಿಡುಗಡೆ ಮಾಡಲಿದೆ ಎಂದು ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ.
ಬೋಸ್ ಅವರಿಗೆ ಸಂಬಂಧಪಟ್ಟ 25 ಕಡತಗಳನ್ನು ಸಾಂಸ್ಕೃತಿಕ ಖಾತೆ ಸಚಿವ ಮಹೇಶ್ ಶರ್ಮಾ ಬಿಡುಗಡೆ ಮಾಡಲಿದ್ದಾರೆ ಎಂದು ಸುದ್ದಿಮೂಲಗಳು ಹೇಳಿವೆ.
ಕಳೆದ ತಿಂಗಳು ಬೋಸ್‌ಗೆ ಸಂಬಂಧಪಟ್ಟ 50 ಕಡತಗಳನ್ನು www.Netajipapers.Gov.In.
ಪೋರ್ಟಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಜನವರಿ 23 ರಂದು ನೇತಾಜಿ ಅವರ 119ನೇ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಅವರು ನೂರರಷ್ಟು ರಹಸ್ಯ ಕಡತಗಳನ್ನು ಬಹಿರಂಗ ಪಡಿಸಿದ್ದರು.
ಪೋರ್ಟಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಜನವರಿ 23 ರಂದು ನೇತಾಜಿ ಅವರ 119ನೇ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಅವರು ನೂರರಷ್ಟು ರಹಸ್ಯ ಕಡತಗಳನ್ನು ಬಹಿರಂಗ ಪಡಿಸಿದ್ದರು.
ಆದಾಗ್ಯೂ, ನೇತಾಜಿಗೆ ಸಂಬಂಧಪಟ್ಟ ಎರಡು ಪ್ರಧಾನ ಕಡತಗಳನ್ನು ಈ ವರ್ಷಾಂತ್ಯದಲ್ಲಿ ಜಪಾನ್ ಬಿಡುಗಡೆಗೊಳಿಸಲಿದೆ ಎಂದು ಕೇಂದ್ರ ಸರ್ಕಾರ ಹೇಳಿದ್ದರೂ, ಜಪಾನ್ ಬಳಿಯಿರುವ ಇನ್ನೂ ಮೂರು ಕಡತಗಳನ್ನು ಯಾವಾಗ ಬಿಡುಗಡೆ ಮಾಡಲಾಗುವುದು ಎಂಬುದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಜಪಾನ್‌ನಿಂದ ಮಾಹಿತಿ ಸಿಕ್ಕಿಲ್ಲ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


