ದೇಶ

ಆದರ್ಶ ಅಪಾರ್ಟ್ ಮೆಂಟ್ ನೆಲಸಮಗೊಳಿಸುವಂತೆ ಬಾಂಬೆ ಹೈಕೋರ್ಟ್ ಆದೇಶ

ಕಾರ್ಗಿಲ್ ಯುದ್ಧದಲ್ಲಿ ಮಡಿದ ಹುತಾತ್ಮ ಯೋಧರ ಕುಟುಂಬಗಳಿಗಾಗಿ ನಿರ್ಮಿಸಲಾಗಿದ್ದ ಆದರ್ಶ ಅಪಾರ್ಟ್ ಮೆಂಟ್ ಅನ್ನು ನೆಲಸಮಗೊಳಿಸುವಂತೆ ಬಾಂಬೆ...

ಆದರ್ಶ ಅಪಾರ್ಟ್ ಮೆಂಟ್ ನೆಲಸಮಗೊಳಿಸುವಂತೆ ಬಾಂಬೆ ಹೈಕೋರ್ಟ್ ಆದೇಶ
ಆದರ್ಶ ಅಪಾರ್ಟ್ ಮೆಂಟ್
Published On :
ಮುಂಬೈ: ಕಾರ್ಗಿಲ್ ಯುದ್ಧದಲ್ಲಿ ಮಡಿದ ಹುತಾತ್ಮ ಯೋಧರ ಕುಟುಂಬಗಳಿಗಾಗಿ ನಿರ್ಮಿಸಲಾಗಿದ್ದ ಆದರ್ಶ ಅಪಾರ್ಟ್ ಮೆಂಟ್ ಅನ್ನು ನೆಲಸಮಗೊಳಿಸುವಂತೆ ಬಾಂಬೆ ಹೈಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.
ಆದರ್ಶ ಹೌಸಿಂಗ್ ಸೊಸೈಟಿ ನಿರ್ಮಿಸಿರುವ ಆದರ್ಶ ಬಹುಮಹಡಿ ಕಟ್ಟಡ ಹಸಿರು ನಿಯಮ ಉಲ್ಲಂಘಿಸಿ ನಿರ್ಮಿಸಲಾಗಿದ್ದು, ಅದನ್ನು ಮೂರು ತಿಂಗಳಲ್ಲಿ ನೆಲಸಮಗೊಳಿಸುವಂತೆ ಕೋರ್ಟ್ ಆದೇಶಿಸಿದೆ. ಆದರೆ ಅಪಾರ್ಟ್ ಮೆಂಟ್ ನಿವಾಸಿಗಳು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.
ಕೇಂದ್ರ ರಕ್ಷಣಾ ಸಚಿವಾಲಯ ಮುಂಬೈ ಕೊಲಬಾದಲ್ಲಿ ಹುತಾತ್ಮ ಯೋಧರ ಕುಟುಂಬಗಳಿಗಾಗಿ 31 ಮಹಡಿಯ ಅಪಾರ್ಟ್ ಮೆಂಟ್ ವೊಂದನ್ನು ನಿರ್ಮಿಸಿತ್ತು. ಆದರೆ ಫ್ಲ್ಯಾಟ್ ಹಂಚಿಕೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು ತನಿಖೆಯಿಂದ ಬಹಿರಂಗವಾಗಿತ್ತು. ಯೋಧರಲ್ಲದೆ, ಹಲವು ಅಧಿಕಾರಿಗಳು, ರಾಜಕಾರಣಿಗಳು ಹಾಗೂ ಅವರ ಸಂಬಂಧಿಕರು ಈ ಅಪಾರ್ಟ್ ಮೆಂಟ್ ನಲ್ಲಿ ಅಕ್ರಮವಾಗಿ  ಫ್ಲ್ಯಾಟ್ ಪಡೆದಿದ್ದರು. ಹಗರಣದ ಪರಿಣಾಮವಾಗಿ ಅಶೋಕ ಚವಾಣ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ತಲೆದಂಡ ತೆರಬೇಕಾಗಿ ಬಂದಿತ್ತು. 31 ಮಹಡಿಗಳ ಕಟ್ಟಡದಲ್ಲಿ ಚವಾಣ್ ಅವರ ಮೂವರು ಸಂಬಂಧಿಗಳು ಫ್ಲಾಟ್​ಪಡೆದಿದ್ದರು.
2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಕೆಲವು ತಿಂಗಳುಗಳ ಬಳಿಕ ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಿತ್ತು ಹಾಕಿ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿತ್ತು. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಇತ್ತೀಚೆಗೆ ಆದರ್ಶ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.