ದೇಶ

ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯನ್ನು ಮೋದಿ ಸರ್ಕಾರ ರಕ್ಷಿಸುತ್ತಿದೆ: ಕಾಂಗ್ರೆಸ್

ವಿವಿಐಪಿ ಹೆಲಿಕಾಫ್ಟರ್ ಹಗರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯನ್ನು ಮೋದಿ ಸರ್ಕಾರ ರಕ್ಷಿಸುತ್ತಿದೆ: ಕಾಂಗ್ರೆಸ್
ನರೇಂದ್ರ ಮೋದಿ
Published On :

ನವದೆಹಲಿ: ವಿವಿಐಪಿ ಹೆಲಿಕಾಫ್ಟರ್ ಹಗರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ. ಸಿಬಿಐ ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದರೂ ಸಹ ವಿವಿಐಪಿ ಹೆಲಿಕಾಫ್ಟರ್  ಹಗರಣದಲ್ಲಿ ಭಾಗಿಯಾಗಿರುವ ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯನ್ನು   ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಏಕೆ ರಕ್ಷಿಸುತ್ತಿದೆ ಎಂದು ರಣ್ ದೀಪ್ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.

ವಾಸ್ತವದಲ್ಲಿ ಕಳೆದ ಎರಡು ವರ್ಷಗಳಿಂದ ಆಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯನ್ನು ರಕ್ಷಿಸುತ್ತಿರುವವರು ಯಾರಾದರೂ ಇದ್ದರೆ ಅದು ಪ್ರಧಾನಿ ನರೇಂದ್ರ ಮೋದಿ ಮಾತ್ರ ಎಂದು ಸುರ್ಜೇವಾಲ ಆರೋಪಿಸಿದ್ದಾರೆ. 2015 ರ ಅಕ್ಟೋಬರ್ ನಲ್ಲಿ ಪ್ರಧಾನಿ ಮೋದಿ ಸರ್ಕಾರ ಟಾಟಾ ಹಾಗೂ ಅಗಸ್ಟಾ ವೆಸ್ಟ್ ಲ್ಯಾಂಡ್ ನ ಪಾಲುದಾರಿಕೆಯ ರೋಟೋಕ್ರಾಫ್ಟ್ ಸಂಸ್ಥೆಗೆ ವಿದೇಶಿ ಬಂಡವಾಳ ಉತ್ತೇಜನ ಮಂಡಳಿಯ ಎಫ್ಐಪಿಬಿಯ ಅನುಮತಿ ನೀಡಿತ್ತು ಈ ಬಗ್ಗೆ ರಕ್ಷಣಾ ಸಚಿವರು ಉತ್ತರಿಸುತ್ತಾರಾ ಎಂದು ಸುರೇಜಾವಾಲ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.