ದೇಶ

ಪಶ್ಚಿಮ ಬಂಗಾಳದಲ್ಲಿ ಶೇ.79.19 ರಷ್ಟು ಮತದಾನ, ಕಾಂಗ್ರೆಸ್ ಅಭ್ಯರ್ಥಿಗಳ ಪರ ಸಿಪಿಐ ನಾಯಕರ ಮತಚಲಾವಣೆ

ಪಶ್ಚಿಮ ಬಂಗಾಳ ವಿಧಾನಸಭೆಗೆ 5 ನೇ ಹಂತದ ಮತದಾನ ಮುಕ್ತಾಯಗೊಂಡಿದ್ದು ಶೇ.72.19 ರಷ್ಟು ಮತದಾನ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಶೇ.79.19 ರಷ್ಟು ಮತದಾನ, ಕಾಂಗ್ರೆಸ್ ಅಭ್ಯರ್ಥಿಗಳ ಪರ ಸಿಪಿಐ ನಾಯಕರ ಮತಚಲಾವಣೆ
Published On :

ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭೆಗೆ 5 ನೇ ಹಂತದ ಮತದಾನ ಮುಕ್ತಾಯಗೊಂಡಿದ್ದು ಶೇ.72.19 ರಷ್ಟು ಮತದಾನ ನಡೆದಿದೆ.
ಬಂಗಾಳದಲ್ಲಿ ಕಾಂಗ್ರೆಸ್- ಸಿಪಿಐ(ಎಂ) ಪಕ್ಷಗಳು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, 5 ನೇ ಹಂತದ ಮತದಾನದಲ್ಲಿ ಕಮ್ಯುನಿಷ್ಟ್ ಪಕ್ಷದ ನಾಯಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾವಣೆ ಮಾಡಿದ್ದಾರೆ. ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ  ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗು ಕಮ್ಯುನಿಷ್ಟ್ ಪಕ್ಷದ ನಾಯಕ ಬುದ್ಧದೇವ್ ಭಟ್ಟಾಚಾರ್ಯ,  ದಕ್ಷಿಣ ಕೋಲ್ಕತಾದ ಬ್ಯಾಲಿಗಂಜ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ದೇವ್ ನಾಥ್ ಪರ ಮತ ಚಲಾವಣೆ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.
ಬಂಗಾಳದಲ್ಲಿ ಕಾಂಗ್ರೆಸ್- ಸಿಪಿಐ(ಎಂ) ಅಧಿಕಾರಕ್ಕೆ ಬರಲಿದೆ ಎಂದು ಸಿಪಿಐ(ಎಂ) ನ ನಾಯಕ ಮೊಹಮ್ಮದ್ ಸಲೀಮ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.