ಆಲಿಘಡ ವಿವಿಯಲ್ಲಿ ಹಿಂಸಾಚಾರ: ಓರ್ವ ಬಂಧನ, 12 ವಿದ್ಯಾರ್ಥಿಗಳ ಅಮಾನತು
ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಕಳೆದ ವಾರ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಓರ್ವ ವ್ಯಕ್ತಿಯನ್ನು...

ಆಲಿಘಡ್: ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಕಳೆದ ವಾರ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಶ್ವವಿದ್ಯಾಲಯದ ಕಾನೂನು ವಿಭಾಗದ ಸಂಶೋಧಕ ವಿದ್ವಾಂಸ ಮೊಹಮ್ಮದ್ ಜೊರೈಜ್ ಅವರನ್ನು ವಿಶೇಷ ತನಿಖಾ ತಂಡ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ವಿದ್ಯಾಲಯದ ಕ್ಯಾಂಪಸ್ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಈ ಹಿಂದೆ ಅಧಿಕಾರಿಗಳಿಂದ ಶಿಸ್ತು ಕ್ರಮ ಎದುರಿಸಿದ್ದರು.
ಕಳೆದ ಶನಿವಾರ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಹಿಂಸಾಕೃತ್ಯದ ನಂತರ ಸಿಸಿಟಿವಿ ಕ್ಯಾಮರಾ ಮೂಲಕ ಜೊರೈಕ್ ನ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಜನರನ್ನು ಬಂಧಿಸುವ ಸಾಧ್ಯತೆಯಿದೆ. ಹಿಂಸಾಚಾರ ಘಟನೆಗೆ ಸಂಬಂಧಪಟ್ಟಂತೆ ಒಟ್ಟು 15 ಎಫ್ ಐಆರ್ ಗಳನ್ನು ದಾಖಲಿಸಲಾಗಿದೆ. ವಿಶ್ವವಿದ್ಯಾಲಯದ ಇಬ್ಬರು ಹಳೆ ವಿದ್ಯಾರ್ಥಿಗಳನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟ ಕೇಸಿನಲ್ಲಿ 8 ಮಂದಿಯ ಹೆಸರು ಕೇಳಿಬರುತ್ತಿವೆ.
ಈ ನಡುವೆ ಆಲಿಘಡ್ ಮುಸ್ಲಿಂ ವಿಶ್ವವಿದ್ಯಾಲಯ 12 ವಿದ್ಯಾರ್ಥಿಗಳನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮಾನತು ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


