ದೇಶ

ಎನ್ ಇಇಟಿ ಮಾರ್ಪಾಡಿಗೆ ಸುಪ್ರೀಂ ಕೋರ್ಟ್ ನಕಾರ: ನಾಳೆ ಮೊದಲ ಹಂತದ ಪರೀಕ್ಷೆ

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ಎನ್ ಇಇಟಿ)ಗೆ ಸಂಬಂದಪಟ್ಟ ಆದೇಶದಲ್ಲಿ ಮಾರ್ಪಾಡು ಮಾಡಬೇಕೆಂದು...

ಎನ್ ಇಇಟಿ ಮಾರ್ಪಾಡಿಗೆ ಸುಪ್ರೀಂ ಕೋರ್ಟ್ ನಕಾರ: ನಾಳೆ ಮೊದಲ ಹಂತದ ಪರೀಕ್ಷೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ಎನ್ ಇಇಟಿ)ಗೆ ಸಂಬಂದಪಟ್ಟ ಆದೇಶದಲ್ಲಿ ಮಾರ್ಪಾಡು ಮಾಡಬೇಕೆಂದು ವಿದ್ಯಾರ್ಥಿಗಳ ಸಮೂಹವೊಂದು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಿರಸ್ಕರಿಸಿದೆ.

ಯಥಾಪ್ರಕಾರ ಮೊದಲನೇ ಹಂತದ ಪರೀಕ್ಷೆ ನಾಳೆ ಮೇ 1ರಂದು ನಡೆಯಲಿ ಎಂದು ಕೋರ್ಟ್ ಆದೇಶ ನೀಡಿದೆ.

ಸಿಬಿಎಸ್ ಇ ಮತ್ತು ರಾಜ್ಯ ಮಂಡಳಿ ಪಠ್ಯಕ್ರಮದಲ್ಲಿ ಬದಲಾವಣೆಯಿದ್ದು ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರು ಮಾಡಲು ಸಮಯ ಸಾಕಷ್ಟು ಇಲ್ಲ, ರಾಜ್ಯ ಸಿಲೆಬಸ್ ನವರಿಗೆ ಪ್ರತ್ಯೇಕ ಪರೀಕ್ಷೆ ನಡೆಸಬೇಕೆಂದು ಎನ್ ಇಇಟಿ ಆದೇಶದಲ್ಲಿ ಮಾರ್ಪಾಡು ಮಾಡಬೇಕೆಂದು ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಮನವಿಯನ್ನು ಆಲಿಸಿದ ನ್ಯಾಯಾಲಯ, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಿ ನಡೆಸಲು ಯಾವುದೇ ತೊಂದರೆಯಾಗದು. ಪೂರ್ವ ನಿಗದಿಯಂತೆ ಮೇ 1ರಂದೇ ಪರೀಕ್ಷೆ ನಡೆಯಲಿ ಎಂದು ಆದೇಶ ನೀಡಿದೆ.

2016-17ನೇ ಸಾಲಿನ ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ ಗಳ ಅಧ್ಯಯನಕ್ಕೆ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ  ಮೂಲಕ ನಿಗದಿಪಡಿಸಿರುವಂತೆ ಮೇ 1 ಮತ್ತು ಜುಲೈ 24ರಂದು ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ನಿನ್ನೆ ಆದೇಶ ನೀಡಿತ್ತು. ಈಗ ನಿಗದಿಪಡಿಸಿರುವಂತೆ ಆಗಸ್ಟ್ 17ರಂದು ಫಲಿತಾಂಶ ಪ್ರಕಟಗೊಳ್ಳಲಿದ್ದು, ಸೆಪ್ಟೆಂಬರ್ 30ರೊಳಗೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.