ಮುಂಬೈನಲ್ಲಿ ಕಟ್ಟಡ ಕುಸಿದು 2 ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಸಾಧ್ಯತೆ
ಮುಂಬೈನಲ್ಲಿ ಮೂರು ಅಂತಸ್ಥಿನ ಕಟ್ಟಡವೊಂದು ಶನಿವಾರ ಕುಸಿದುಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಹಲವರು ಅವಶೇಷಗಳಡಿ...

Published On :
ಮುಂಬೈ: ಮುಂಬೈನಲ್ಲಿ ಮೂರು ಅಂತಸ್ಥಿನ ಕಟ್ಟಡವೊಂದು ಶನಿವಾರ ಕುಸಿದುಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನ ಕಾಮಾಟಿಪುರದ ಗ್ರ್ಯಾಂಟ್ ರಸ್ತೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಐವರನ್ನು ರಕ್ಷಿಸಲಾಗಿದೆ ಎಂದು ಅಗ್ನಿ ಶಾಮಕ ಸಿಬ್ಬಂದಿ ಹೇಳಿದ್ದಾರೆ.
ಗಾಯಗೊಂಡವರನ್ನು ಸಮೀಪದ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಅವಶೇಷಗಳಡಿ ಹಲವರು ಸಿಲುಕಿರುವ ಸಾಧ್ಯತೆ ಇದೆ ಎಂದಿದ್ದಾರೆ.
ಸ್ಥಳಕ್ಕೆ ಅಗ್ಮಿ ಶಾಮಕ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


